Search


ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 10 ಜನ ಸಾವು; ಮೃತರ ಕುಟುಂಬಕ್ಕೆ 5ಲಕ್ಷ ಪರಿಹಾರ ಘೋಷಿಸಿದ ಸಿಎಂ

ಉತ್ತರಕನ್ನಡ : ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಪ್ಪೆಚಿಪ್ಪು ತೆಗೆಯಲು ಹೋಗಿದ್ದವರ ಪೈಕಿ 10 ಜನರು ಸಾವನ್ನಪ್ಪಿದ್ದಾರೆ. ಇನ್ನು ಘಟನ ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸಿ, ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುಖ್ಯಮಂತ್ರಿಗಳು ಆಘಾತ ವ್ಯಕ್ತ ಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43), ಲಕ್ಷ್ಮೀ ನಾಯ್ಕ, ಲಕ್ಷ್ಮೀ ಅಣ್ಣಪ್ಪ ನಾಯ್ಕ(44), ಜ್ಯೋತಿ ನಾಯ್ಕ(37) ಉಮೇಶ್ ಮಂಜುನಾಥ ನಾಯ್ಕ(42) ಮೃತರು. ಮೃತರು ಒಂದೇ ಕುಟುಂಬದ ಪಡುಶಿರಾಲಿ ಶಾರದಹೊಳೆ ನಿವಾಸಿಗಳಾಗಿದ್ದಾರೆ.

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದ್ದು, ಒಟ್ಟು 14 ಜನರ ಈ ಪೈಕಿ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನದಿ ಪ್ರದೇಶದಲ್ಲಿ ಅಪಾರ ಜನರು ಸೇರಿದ್ದು, ಉಳಿದವರಾದ್ರೂ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಸಾಮಾನ್ಯವಾಗಿ ಮೀನುಗಾರಿಗೆ ಹೇಗೆ ನಡೆಯುತ್ತೋ ಹಾಗೇ ಕಪ್ಪೆಚಿಪ್ಪು ತೆಗೆಯಲು ನದಿ, ಸಮುದ್ರದ ನೀರು ಬತ್ತಿದಾಗ ಹೋಗುತ್ತಾರೆ. ಇಲ್ಲೂ ಸಹ ಇಡೀ ಕುಟುಂಬ ಕಪ್ಪೆಚಿಪ್ಪು ತೆಗೆಯಲು ತಟ್ಟೆಹಕ್ಕಲು ನದಿಗೆ ತೆರಳಿದ್ದರು. ಆದ್ರೆ, ನೀರಿನ ಆಳ ಗಮನಿಸದೇ ಕಪ್ಪೆಚಿಪ್ಪು ತೆಗೆಯಲು ಹೋಗಿರುವುದೇ ಇಷ್ಟು ದೊಡ್ಡ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಆಘಾತ..!

ಎಂಟು ಜನರು ನೀರುಪಾಲಾಗಿರುವ ಘಟನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮೃತ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದರೆ.

 

By News Desk - 24-05-2026


Ads in Post