Search


16 ವರ್ಷದ ಮೊಮ್ಮಗಳ ಮೇಲೆ 70 ಅಜ್ಜನಿಂದ ಅತ್ಯಾಚಾರ; ಗರ್ಭಿಣಿಯಾದ ಬಾಲಕಿ

ಉತ್ತರ ಪ್ರದೇಶ: 16 ವರ್ಷದ ಮೊಮ್ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 70 ವರ್ಷದ ಅಜ್ಜನನ್ನು ಪೊಲೀಸರು ಬಂಧಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಬಾಲಕಿಯ ತಾಯಿ ಮೃತಪಟ್ಟಿದ್ದು, ಆಕೆ ತನ್ನ ತಂದೆ ಹಾಗೂ ಅಜ್ಜನೊಂದಿಗೆ ವಾಸಿಸುತ್ತಿದ್ದಳು. ಬಾಲಕಿಯ ತಂದೆ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಮನೆಯಲ್ಲಿ ಆಕೆ ಒಂಟಿಯಾಗಿರುತ್ತಿದ್ದಳು ಎನ್ನಲಾಗಿದೆ. ಇದೇ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಅಜ್ಜ, ಸುಮಾರು ಮೂರು ತಿಂಗಳ ಕಾಲ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯಕೀಯ ತಪಾಸಣೆ ನಡೆಸಿದಾಗ ಬಾಲಕಿ ಸುಮಾರು ಎರಡೂವರೆ ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ. ಈ ವಿಚಾರ ತಿಳಿದ ಬಳಿಕ ಪೊಲೀಸರು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಆಕೆಯ ಆರೋಪದ ಆಧಾರದ ಮೇಲೆ 70 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಬಾಲಕಿಗೆ ಅಗತ್ಯ ವೈದ್ಯಕೀಯ ಹಾಗೂ ಕಾನೂನು ನೆರವು ಒದಗಿಸಲಾಗುತ್ತಿದೆ.

By Ravikumar - 24-08-2026


Ads in Post