Search


POKಯಲ್ಲಿ 30 ಕಾಶ್ಮೀರಿಗಳ ಹತ್ಯೆ : ಪಾಕ್‌ ಸರ್ಕಾರದ ವಿರುದ್ದ ಭಾರತ ಕಿಡಿ..!

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಹಿಂಸಚಾರ ಮಿತಿ ಮೀರಿದ್ದು,, ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಪಾಕಿಸ್ತಾನ ಸೇನೆ ನಿರ್ಧಯವಾಗಿ ಗುಂಡು ಹಾರಿಸಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ, ಈ ಘಟನೆಗೆ ಭಾರತ ಆಕ್ರೋಶ ಹೊರ ಹಾಕಿದ್ದು. ಕಾಶ್ಮೀರಿಗಳ ಹತ್ಯೆಗೆ ನೇರ ಕಾರಣ ಪಾಕಿಸ್ತಾನ ಎಂದು ಟೀಕಿಸಿದೆ.

ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಿರುವ ಹಣದುಬ್ಬರ, ಗಗನಕ್ಕೇರಿರುವ ವಿದ್ಯುತ್ ಬಿಲ್‌ಗಳು, ಗೋಧಿ ಹಿಟ್ಟಿನ ಬೆಲೆ ಏರಿಕೆ ಹಾಗೂ ಸರ್ಕಾರದ ಅಸಮರ್ಪಕ ನೀತಿಯ ವಿರುದ್ದ ಕಾಶೀರಿ ಪ್ರತಿಭಟನಕಾರರು ಸರ್ಕಾರದ ವಿರುದ್ದ ಪ್ರತಿಭಟಿಸುತ್ತಿದ್ದರು.  ಈ ವೇಳೆ ಪಾಕಿಸ್ತಾನಿ ಪೊಲೀಸರು, ಸೇನೆ ಮತ್ತು ರೇಂಜರ್‌ಗಳು  ಪ್ರತಿಭಟನಾಕಾರರ ಮೇಲೆ ನೇರವಾಗಿ ಗುಂಡು ಹಾರಿಸುವುದರ ಜೊತೆಗೆ, ಅಶ್ರುವಾಯು ಬಳಸಿದ್ದಾರೆ. ಅತ್ಯಂತ ಅಪಾಯಕಾರಿ ಪೆಲೆಟ್ ಗನ್‌ಗಳನ್ನು ಸಹ ಬಳಸಿದ್ದರಿಂದ 7 ಜನರು ಗಂಭೀರವಾಗಿ ಗಾಯಗೊಂಡರು. 

ಈ ವೇಳೆ ಭದ್ರತಾ ಪಡೆಗಳು ನಡೆಸಿದ ಲಘು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮತ್ತು ಪ್ಲಾಸ್ಟಿಕ್ ಹಾಗೂ ಜೀವಂತ ಗುಂಡುಗಳ ದಾಳಿಯಿಂದಾಗಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಈ ಘಟನೆಯ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪ್ರಮುಖ ನಗರಗಳಲ್ಲಿ ಕರ್ಫ್ಯೂ ಪರಿಸ್ಥಿತಿ ಇದೆ.

ಘಟನೆಗೆ ಭಾರತ ತೀವ್ರ ಖಂಡನೆ..!

ಘಟನೆಗೆ ಭಾರತ ಪ್ರತಿಕ್ರಿಯೆ ನೀಡಿದ್ದು, ಇದಕ್ಕೆ ಪಾಕಿಸ್ತಾನವೇ ನೇರ ಹೊಣೆ ಎಂದು ಆರೋಪಿಸಿದೆ. ಹಾಗೇ, ಪಿಒಕೆಯಲ್ಲಿ ಕಾಶ್ಮೀರಿಗಳ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಪಾಕಿಸ್ತಾನ ಮಾಡುತ್ತಿರುವ ದುಷ್ಕೃತ್ಯಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಾಗಿ ಅಂತಾರಾಷ್ಟ್ರೀಯ ಸಮುದಾಯವು ಪಾಕಿಸ್ತಾನ ದೇಶವನ್ನು ಹೊಣೆಗಾರರನ್ನಾಗಿ ಮಾಡಲಿದೆ ಎಂದು ನಾವು ನಂಬುತ್ತೇವೆ ಎಂದು ಭಾರತ ಭರವಸೆ ವ್ಯಕ್ತಪಡಿಸಿದೆ. 

ನಿನ್ನೆ (ಜೂನ್‌.09)ನಡೆದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, “ಈ ಸಂದರ್ಭದಲ್ಲಿ ಪಾಕಿಸ್ತಾನದಿಂದ ವ್ಯವಸ್ಥಿತವಾಗಿ ಹರಡಲಾಗುತ್ತಿರುವ ಸುಳ್ಳು ಸುದ್ದಿ ಮತ್ತು ವೀಡಿಯೊಗಳ ಸರಣಿಯನ್ನು ನಾವು ಗಮನಿಸುತ್ತಿದ್ದೇವೆ. ಇದು ತನ್ನದೇ ಆದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮತ್ತು ತನ್ನ ಮಾನವ ಹಕ್ಕುಗಳ ಉಲ್ಲಂಘನೆಯಿಂದ ಜಗತ್ತಿನ ಗಮನವನ್ನು ಬೇರೆಡೆಗೆ ತಿರುಗಿಸಲು ಪಾಕಿಸ್ತಾನ ಮಾಡುತ್ತಿರುವ ಹತಾಶ ಪ್ರಯತ್ನವಾಗಿದೆ” ಎಂದು ಕಿಡಿಕಾರಿದ್ದಾರೆ.

By Ravikumar - 10-06-2026


Ads in Post