Search


ಮಾಗಡಿ ಬಳಿಯ ಬಂಡೆ ಕುಸಿದು 7 ಜನ ಸಾವು: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಮಾಗಡಿ ಬಳಿಯ ಮಾದಾಪಟ್ಟಣ ಬಳಿ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಅಪಘಡದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಮೋದಿಯವರು ಟ್ವಿಟ್‌ ಮಾಡಿದ್ದು, “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಕಾವೇರಿ ಕಂಪನಿಗೆ ಸೇರಿದ ಕ್ರಷರ್​ನಲ್ಲಿ ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ಎಂದಿನಂತೆ ಕೆಲಸ ಮಾಡ್ತಿದ್ದ ಕಾರ್ಮಿಕರ ಪಾಲಿಗೆ ಬಂಡೆ ಯಮನಾಗಿ ಬಂದಿದೆ. ಇಟಾಚಿಯಲ್ಲಿ ಕೆಲಸ ಮಾಡುವಾಗ ಬಂಡೆ ಕೆಳಗೆ ಬಿದ್ದಿದ್ದು, ಕಾರ್ಮಿಕರ ಮೇಲೆಯೇ ಬಿದ್ದು ಭಾರೀ ದುರಂತ ಸಂಭವಿಸಿದೆ. ಘಟನೆಯಲ್ಲಿ 7 ಕಾರ್ಮಿಕರು ಸಾವನ್ನಪ್ಪಿದ್ದರು, ಜೊತೆಗೆ 5ವರು ಕಾರ್ಮಿಕರು ಗಾಯಗೊಂಡಿದ್ದರು. ಇನ್ನು ಘಟನಾ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. 

ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, "ಕರ್ನಾಟಕದ ಬೆಂಗಳೂರು ನಗರ ಜಿಲ್ಲೆಯ ಕಲ್ಲು ಗಣಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವುದು ನೋವು ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

By Ravikumar - 02-07-2026


Ads in Post