Search


ಕ್ಯಾಬ್‌ಗಾಗಿ ಕಾಯ್ತಿದ್ದ ಯುವತಿ ಬಳಿ ರೇಟ್ ಕೇಳಿ ಸಿಕ್ಕಿಬಿದ್ದ ಖದೀಮ; ವಿಡಿಯೋ ವೈರಲ್

ಬೆಂಗಳೂರು: ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ಸಾರ್ವಜನಿಕ ಸ್ಥಳದಲ್ಲೇ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. 26 ವರ್ಷದ ಮಹಿಳೆಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದು. ಆರೋಪಿ ಯುವತಿಯನ್ನಉದ್ದೇಶಿಸಿ "ನಿನ್ನ ರೇಟ್ ಎಷ್ಟು? ₹10,000 ಕೊಡುತ್ತೇನೆ" ಎಂದು ಅಸಭ್ಯವಾಗಿ ಮಾತನಾಡಿದ್ದಾನೆ. ಈ ವೇಳೆ ಮಹಿಳೆ ಆತನ ವಿಡಿಯೋ ಮಾಡಿದ್ದೂ. ವಿಡಿಯೋ ಸಮೇತ ದೂರು ದಾಖಳಿಸಿದ್ದಾರೆ.

ಯುವತಿಯ ದೂರಿನ ಆಧಾರದಲ್ಲಿ ರಾಮಮೂರ್ತಿನಗರ ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದು. ವಿಡಿಯೊ, ಸಿಸಿಟಿವಿ ದೃಶ್ಯಗಳು ಹಾಗೂ ಸ್ಥಳೀಯರ ಮಾಹಿತಿಯ ನೆರವಿನಿಂದ ಆರೋಪಿಯನ್ನು ಗುರುತಿಸಿ ಬಂಧಿಸಲಾಗಿದೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಆತಂಕ ವ್ಯಕ್ತವಾಗಿದೆ. 

ಮಹಿಳೆಯರು ಯಾವುದೇ ರೀತಿಯ ಕಿರುಕುಳಕ್ಕೆ ಒಳಗಾದರೆ ಹೆದರದೆ ಕೂಡಲೇ ಪೊಲೀಸರಿಗೆ ದೂರು ನೀಡಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.ಪೊಲೀಸರ ತ್ವರಿತ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

By Ravikumar - 29-07-2026


Ads in Post