Search


ಧರ್ಮಸ್ಥಳ ಷಡ್ಯಂತ್ರದ ಬಗ್ಗೆ ನಟ ಪ್ರಕಾಶ್‌ ರಾಜ್‌ ಮೊದಲ ಪ್ರತಿಕ್ರಿಯೆ..!

ಬೆಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್‌ ರಾಜ್‌ ಅವರ ಹೆಸರು ತಳುಕಾಕಿಕೊಂಡಿದ್ದು, ಈ ಆರೋಪಕ್ಕೆ ನಟ ಪ್ರಕಾಶ್‌ ರಾಜ್‌ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ಕೇಳಿಬರುತ್ತಿದೆ, ಈ ಗಾಳಿ ಸುದ್ದಿಗೆಲ್ಲ ಶೀಘ್ರದಲ್ಲೇ ಉತ್ತರಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಧರ್ಮಸ್ಥಳದ ವಿರುದ್ದ ಷಡ್ಯಂತ್ರದ ಕುರಿತು ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ನಟ ಪ್ರಕಾಶ್‌ ರಾಜ್‌ ಅವರ ಹೆಸರನ್ನ ಉಲ್ಲೇಖಿಸಿದ್ದಾನೆ. ಇದರ ಕುರಿತು ಇದೀಗ ನಟ ತಮ್ಮ ಎಕ್ಷ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಇಂತಹ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯ, ಆದಷ್ಟು ಬೇಗ ಮಾಧ್ಯಮಗಳ ಮುಂದೆ ಬಂದು ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.

ಗಾಳಿ ಸುದ್ದಿಗೆ ಕಿವಿ ಕೊಡಬೇಡಿ ಎಂದ ನಟ..!

‘ಎಲ್ಲರಿಗೂ ನಮಸ್ಕಾರ.. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಕೆಲವು ಸುದ್ದಿಗಳು ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಸಾಕ್ಷಿಯಾಗಿರುವುದರಿಂದ, ಇಂತಹ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವೂ ಆಗಿದೆ’ ಎಂದು ಪ್ರಕಾಶ್ ರಾಜ್ ಪೋಸ್ಟ್ ಆರಂಭಿಸಿದ್ದಾರೆ.

‘ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ನಾನೇ ಖುದ್ದಾಗಿ ಬಂದು ಮಾಧ್ಯಮ ಮಿತ್ರರ ಮೂಲಕ ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಗಾಳಿ ಸುದ್ದಿಗಳನ್ನು ದಯವಿಟ್ಟು ಯಾರೂ ನಂಬಬೇಡಿ’ ಎಂದು ಕೋರಿದ್ದಾರೆ.

By Ravikumar - 12-06-2026


Ads in Post