ಮೈಸೂರು : ಕಾಂತರ ಸಿನಿಮಾವನ್ನ ಹೊಗಳುವ ಭರದಲ್ಲಿ ಚಾವುಂಡಿ ದೈವಕ್ಕೆ ಅಪಮಾನ ಮಾಡಿದ್ದ ನಟ ರಣವೀರ್ ಸಿಂಗ್, ಇಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ಮುಂದೆ ಕ್ಷಮೆಯಾಚಿಸಿದ್ದಾರೆ.
ಗೋವಾ ಫಿಲ್ಮೋತ್ಸವ ಕಾರ್ಯಕ್ರಮದಲ್ಲಿ ರಣವೀರ್ ಸಿಂಗ್ ನಟ ರಿಷಬ್ ಶೆಟ್ಟಿ ಮುಂದೆ ಮಾತನಾಡುತ್ತ. "ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್ ಸಿಂಗ್ ಅನುಕರಣೆ ಮಾಡಿದ್ದರು.
ಆದರೆ ರಣವೀರ್ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು. ನಟನ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಯುವ ವೇಳೆ ರಣವೀರ್ ತಮ್ಮ ಎಕ್ಷ್ ಖಾತೆಯಲ್ಲಿ ಈ ಕುರಿತು ಕ್ಷಮೆ ಕೋರಿ, ವಿಷಾದ ವ್ಯಕ್ತಪಡಿಸಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು.