Search


ಕಾಕ್ರೋಚ್ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ

ಮುಂಬೈ: ದೇಶದ್ಯಾಂತ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಾಪಾಡುವುದು ಅತ್ಯಂತ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಧ್ವನಿಗೆ ನ್ಯಾಯ ಸಿಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಬಾಲಿವುಡ್ ಕೂಡ ವಿದ್ಯಾರ್ಥಿಗಳ ಕೂಗಿಗೆ ಧನಿಗೂಡಿಸಿದ್ದು. ಕನ್ನಡದ ನಟಿ ರಮ್ಯಾ, ವಿನಯ್ ರಾಜ್ ಕುಮಾರ್ ಸೇರಿದಂತೆ ಹಲವು ನಟ ನಟಿಯರು ಇಲ್ಲಿಯವರೆಗೆ ಈ ಪ್ರತಿಭಟನೆಗೆ ಬೆಂಬಲ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಲ್ಮಾನ್ ಖಾನ್, "ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಗಂಭೀರ ಸಮಸ್ಯೆ. ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ದೇಶದ ವಿದ್ಯಾರ್ಥಿಗಳು ಒಂದಾಗಿ ಶಾಂತಿಯುತವಾಗಿ ಹೋರಾಡುತ್ತಿರುವುದು ಶ್ಲಾಘನೀಯ. ಈ ಹೋರಾಟಕ್ಕೆ ಪೋಷಕರ ಬೆಂಬಲವೂ ದೊರೆತಿದೆ" ಎಂದು ಹೇಳಿದ್ದಾರೆ. 

ಜಂತರ್ ಮಂತರ್‌ನಲ್ಲಿ ನಡೆದ ಹಿಂಸಾತ್ಮಕ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, "ಇದು ಶಾಂತಿಯುತ ಪ್ರತಿಭಟನೆಯಾಗಿತ್ತು. ಆದರೆ ಅದು ಹಿಂಸಾತ್ಮಕ ತಿರುವು ಪಡೆದಿರುವುದು ದುಃಖಕರ. ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳೊಂದಿಗೆ ನನ್ನ ಮನಸ್ಸಿದೆ ಎಂದಿರುವ ಸಲ್ಮಾನ್ . ಇದೇ ವೇಳೆ, ವಿದ್ಯಾರ್ಥಿಗಳ ಹೋರಾಟವನ್ನು ರಾಜಕೀಯ ಉದ್ದೇಶಗಳಿಗೆ ಬಳಸಬಾರದು ಎಂದು ಸಲ್ಮಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ.

By Ravikumar - 23-07-2026


Ads in Post