Search


ಸಾರಿಗೆ ಮುಷ್ಕರದ ಜೊತೆಗೆ ನಾಳೆ ಮೆಡಿಕಲ್‌ಗಳು ಬಂದ್‌ : ಔಷಧ ಸಿಗೋದಿಲ್ಲ ಎಚ್ಚರ..!

ಬೆಂಗಳೂರು : ಸಾರಿಗೆ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಮುಷ್ಕರಕ್ಕೆ ಕರೆಕೊಟ್ಟಿರುವ ಬೆನ್ನಲ್ಲೇ ಜನಸಾಮಾನ್ಯರಿಗಗೆ ಮತ್ತೊಂದು ಆಘಾತ ಎದುರಾಗಿದೆ, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ ದೇಶಾದ್ಯಂತ ಖಾಸಗಿ ಔಷದ ಮಳಿಗೆಗಳ ಬಂದ್‌ಗೆ ಕರೆ ಕೊಟ್ಟಿದ್ದು. ಇದಕ್ಕೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ನಾಳೆ ಬಸ್‌ಗಳ ಜೊತೆಗೆ ತುರ್ತು ಸಂದರ್ಭದಲ್ಲಿ ಔಷದ ಸಿಗುವುದು ಕೂಡ ದುಸ್ತರವಾಗುವ ಸಾಧ್ಯತೆ ಇದೆ.

ಖಾಸಗಿ ಮೆಡಿಕಲ್ ಶಾಪ್ ಮಾಲೀಕರು ಹಾಗೂ ವಿತರಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ, ಯಾವುದೇ ಸೂಕ್ತ ಲಿಖಿತ ಪ್ರಿಸ್ಕ್ರಿಪ್ಷನ್ ಇಲ್ಲದೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ರಾಜಾರೋಷವಾಗಿ ನಿಯಮಬಾಹಿರವಾಗಿ ಔಷಧಗಳನ್ನು ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಹಾಗೂ ಸಣ್ಣ ವ್ಯಾಪಾರಿಗಳ ಬದುಕು ಬೀದಿಗೆ ಬರುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ದೊಡ್ಡ ಕಾರ್ಪೊರೇಟ್ ಕಂಪನಿಗಳು ಭಾರಿ ರಿಯಾಯಿತಿ (ಡೀಪ್ ಡಿಸ್ಕೌಂಟ್) ನೀಡಿ ಗ್ರಾಹಕರನ್ನು ಸೆಳೆಯುತ್ತಿರುವುದರಿಂದ ಸಾಂಪ್ರದಾಯಿಕ ಮೆಡಿಕಲ್ ಶಾಪ್‌ಗಳು ನಷ್ಟ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಇಡೀ ದಿನ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ಮುಚ್ಚಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಆಸ್ಪತ್ರೆ ಆವರಣದೊಳಗಿನ ಫಾರ್ಮಸಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದರೂ, ಜನಸಾಮಾನ್ಯರು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಇಂದೇ ಅಗತ್ಯ ಔಷಧಗಳನ್ನು ಖರೀದಿಸಿಟ್ಟುಕೊಳ್ಳುವುದು ಉತ್ತಮ.

By thebigbulletin.com - 19-05-2026


Ads in Post