ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ನಡೆದ ದಾಳಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ದಾಳಿಯಲ್ಲಿ ಅಭಿಷೇಕ್ ಅವರ ಎದೆ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಕೊನೆಯ ಕ್ಷಣದಲ್ಲಿ ಹೆಲ್ಮೆಟ್ ಧರಿಸದಿದ್ದರೆ ಪರಿಣಾಮ ಘೋರವಾಗುವ ಸಾಧ್ಯತೆಗಳಿತ್ತು ಎಂದು ಹೇಳಿದ್ದಾರೆ.
ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಒಳಗಾದ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದ ವೇಳೆ, ಕೆಲ ಸ್ಥಳೀಯರು ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ ನಡೆಸಿ ಮೊಟ್ಟೆ ಎಸೆದು, ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಅವರನ್ನು ಸುತ್ತುವರಿದ ಗುಂಪು ತಳ್ಳಾಟ ನಡೆಸಿದ ಆರೋಪವೂ ಕೇಳಿಬಂದಿದೆ.
ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿಯವರು, ಘಟನೆಯ ಬಳಿಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಕುತ್ತಿಗೆ, ಬೆನ್ನು ಹಾಗೂ ಸೊಂಟ ಭಾಗದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ಹಲವು ಪರೀಕ್ಷೆಗಳನ್ನು ನಡೆಸಲು ಸೂಚಿಸಿದ್ದರು ಎಂದು ತಿಳಿಸಿದ್ದಾರೆ.