Search


ದಾವಣಗೆರೆಯಲ್ಲಿ ಕುಳಿತು ರಾಮ ಮಂದಿರ ಸ್ಪೋಟಿಸಲು ಸಂಚು; ಶಂಕಿತ ಉಗ್ರ ಅರೆಸ್ಟ್‌

ದಾವಣಗೆರೆ : ನಿನ್ನೆ ದಾವಣಗೆರೆಯ ಹರಿಹರದಲ್ಲಿ ಬಂಧಿಸಲ್ಪಟ್ಟಿದ್ದ ಶಂಕಿತ ಉಗ್ರ ಸುಹೇಲ್‌  ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ‘ಕೋಟ್ಯಂತರ ಹಿಂದುಗಳ ಆರಾಧ್ಯ ದೈವದ ನೆಲೆಯಾದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ನಾನು ಬಯಸಿದ್ದೆ’ ಎಂದು ಈತ ವಿಚಾರಣೆಯ ವೇಳೆ ಬಾಯಿ ಬಿಟ್ಟಿದ್ದಾನೆ.

ರಾಜ್ಯದಲ್ಲಿ ಶಂಕಿತ ಉಗ್ರರ ಭೇಟೆ ಚುರುಕು ಪಡೆಯುತ್ತಿದ್ದು. ಪಾಕಿಸ್ತಾನದ ನಂಟಿರುವ ಹಲವರನ್ನ ಪೊಲೀಸರು ಬಂಧಿಸಿದ್ದಾರೆ. ಇದೀಗ ಮಂಗಳವಾರ ಹರಿಹರ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್‌ ಎಂಬಾತನನ್ನ ಬಂಧಿಸಲಾಗಿದೆ. ಈತ ಹರಿಹರದಲ್ಲಿರುವ ಕೈಗಾರಿಕ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಪೇಟಿಂಗ್‌ ಕೆಲಸ ಮಾಡುತ್ತಿದ್ದ. ಈತನ ಚಟುವಟಿಕೆ ಮೇಲೆ ಕಣ್ಣಿಟ್ಟಿದ್ದ ಪೊಲೀಸರು ಇಇದೀಗ ಕಾರ್ಯಚರಣೆ ನಡೆಸಿ ಈತನನ್ನ ಬಂಧಿಸಿದ್ದಾರೆ. 

ಅಂತಾರಾಷ್ಟ್ರೀಯ ಉಗ್ರ ಜಾಲದೊಂದಿಗೆ ನಂಟು

ಇನ್ನು ಪೊಲೀಸರು ಈತನ ಮೊಬೈಲ್ ಫೋನ್ ಅನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅಂತಾರಾಷ್ಟ್ರೀಯ ಉಗ್ರ ಜಾಲದೊಂದಿಗೆ ಹೊಂದಿದ್ದ ಸಂಪರ್ಕದ ಪ್ರಮುಖ ಸುಳಿವುಗಳು ಲಭ್ಯವಾಗಿವೆ. ಈತನ ಫೋನ್‌ನಲ್ಲಿ ಪಾಕಿಸ್ತಾನದ ಕಂಟ್ರಿ ಕೋಡ್ ಹೊಂದಿರುವ ಮೊಬೈಲ್ ಸಂಖ್ಯೆಯೊಂದು ‘ರಾಣಾ ಬಾಯ್’ ಎಂಬ ಹೆಸರಿನಲ್ಲಿ ಸೇವ್ ಆಗಿರುವುದು ಪತ್ತೆಯಾಗಿದೆ.

ಜೊತೆಗೆ ತನಿಖೆಯ ವೇಳೆ ಸುಹೇಲ್ ದೇಶದ್ರೋಹಿ ಚಟುವಟಿಕೆಗಳನ್ನು ನಡೆಸುವ ಅಂತರ್ಜಾಲದ ರಹಸ್ಯ ಗುಂಪುಗಳಾದ ‘MEMON & JUTTU- 333’ ಹಾಗೂ ‘RANABHAI 333’ ಗ್ರೂಪ್‌ಗಳಲ್ಲಿ ಸಕ್ರಿಯ ಸದಸ್ಯನಾಗಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ, ವೃತ್ತಿಪರ ಉಗ್ರರನ್ನು ಹೋಲುವ ರೀತಿಯಲ್ಲಿ ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ಪೋಸ್ ನೀಡಿ ತೆಗೆಸಿಕೊಂಡಿದ್ದ ಹಲವಾರು ಫೋಟೋಗಳು ಈತನ ಮೊಬೈಲ್ ಗ್ಯಾಲರಿಯಲ್ಲಿ ಪತ್ತೆಯಾಗಿವೆ.   

By Ravikumar - 24-06-2026


Ads in Post