Search


ನಂದಿನಿ ಹಾಲಿನ ದರ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ; ಬರೋಬ್ಬರಿ 8₹ ಹೆಚ್ಚಳ

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ರಾಜ್ಯದಲ್ಲಿ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬಹುತೇಕ ನವೆಂಬರ್ 1ರಿಂದ ಹಾಲಿನ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಹಾಲಿನ ದರ ಏರಿಕೆಯಲ್ಲಿ 80:20 ಸೂತ್ರ ಅನುಸರಿಸಲು ಸರ್ಕಾರ ನಿರ್ಧರಿಸಿದೆ. ಅಂದರೆ, ಪ್ರತಿ ಲೀಟರ್‌ಗೆ ₹8 ಹೆಚ್ಚಳವಾದರೆ, ಅದರಲ್ಲಿ ₹6 ರೈತರಿಗೆ ಹಾಗೂ ₹2 ಹಾಲು ಒಕ್ಕೂಟಗಳಿಗೆ ಹಂಚಿಕೆಯಾಗುವ ಸಾಧ್ಯತೆಯಿದೆ. ಈ ಹಿಂದೆ ಹಾಲು ಒಕ್ಕೂಟಗಳು 70:30 ಅನುಪಾತದಲ್ಲಿ ದರ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ, 80:20 ಅನುಪಾತದಲ್ಲಿ ದರ ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು.

By Ravikumar - 06-10-2026


Ads in Post