ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ವಿಚಾರಣೆ ವೇಳೆ, “ನಾನು ಯಾರು ಗೊತ್ತಾ? ನೀವು ಯಾರ ಜೊತೆ ಮಾತನಾಡುತ್ತಿದ್ದೀರಿ ಗೊತ್ತಾ? ನಾನು ಮಾಜಿ ಸಂಸದ, ಮಾಜಿ ಪ್ರಧಾನಿ ಮೊಮ್ಮಗ” ಎಂದು ಪ್ರಜ್ವಲ್ ರೇವಣ್ಣ ಪೊಲೀಸರಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ, ಬೇಕಂತಲೇ ನನ್ನನ್ನು ಪ್ರಕರಣದಲ್ಲಿ ಸಿಕ್ಕಿಸಲು ಪ್ರಯತ್ನಿಸಲಾಗುತ್ತಿದೆ ಹಾಗೂ ನನ್ನ ಜಾಮೀನು ರದ್ದುಗೊಳಿಸಲು ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.
“ನಾನು ಏನೂ ಹೇಳಲ್ಲ, ಏನೂ ಮಾತನಾಡಲ್ಲ. ನೀವು ಏನು ಬೇಕಾದರೂ ಮಾಡಿಕೊಳ್ಳಿ” ಎಂದು ಪೊಲೀಸರಿಗೆ ತಿಳಿಸಿದ ಪ್ರಜ್ವಲ್ ರೇವಣ್ಣ, ಈ ವಿಚಾರವಾಗಿ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಮೊಬೈಲ್ ಪತ್ತೆಯಾದ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.