Search


ಕಾವೇರಿ ವಿವಾದ: ಮಾತುಕತೆ ಎಂದರೆ ರಾಜಿ ಅಲ್ಲ, ತಮಿಳುನಾಡು ಸಿಎಂ ವಿಜಯ್ ಸ್ಪಷ್ಟನೆ

ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕದೊಂದಿಗೆ ಮಾತುಕತೆ ನಡೆಸಲು ಮುಂದಾಗಿರುವ ತಮ್ಮ ನಿರ್ಧಾರವನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿಗೆ ತೆರಳಿ ಕರ್ನಾಟಕದ ನಾಯಕರೊಂದಿಗೆ ಚರ್ಚೆ ನಡೆಸುವುದರಿಂದ ತಮಿಳುನಾಡಿನ ಹಕ್ಕುಗಳ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಂಡಂತಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾವೇರಿ ವಿವಾದ ಹಲವು ವರ್ಷಗಳಿಂದ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ರಾಜಕೀಯ ಹಾಗೂ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದು ತಪ್ಪಲ್ಲ ಎಂದು ವಿಜಯ್ ಹೇಳಿದ್ದಾರೆ. ‘ಮಾತುಕತೆ ನಡೆಸುವುದು ಎಂದರೆ ನಮ್ಮ ಹಕ್ಕುಗಳನ್ನು ಬಿಟ್ಟುಕೊಡುವುದು ಎಂದಲ್ಲ. ತಮಿಳುನಾಡಿನ ಹಿತಾಸಕ್ತಿಯನ್ನು ಕಾಪಾಡಿಕೊಂಡೇ ಕರ್ನಾಟಕದೊಂದಿಗೆ ಚರ್ಚೆ ನಡೆಸಬಹುದು’ ಎಂಬ ನಿಲುವನ್ನು ಅವರು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಭೇಟಿಗೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ವ್ಯಕ್ತವಾಗುತ್ತಿರುವ ಟೀಕೆಗಳಿಗೂ ವಿಜಯ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಹಿತಕ್ಕಾಗಿ ಅಗತ್ಯವಿದ್ದರೆ ರಾಜಕೀಯ ಟೀಕೆಗಳನ್ನು ಎದುರಿಸಲು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಕಾವೇರಿ ಮತ್ತು ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸರ್ಕಾರದ ನಿಲುವು ಸ್ಪಷ್ಟವಾಗಿರಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಸರ್ವಪಕ್ಷ ಸಭೆ ಕರೆಯಬೇಕು ಎಂಬ ಬೇಡಿಕೆಯೂ ಕೇಳಿಬಂದಿದೆ.

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನೀರು ಹಂಚಿಕೆ ವಿಚಾರ ಸೂಕ್ಷ್ಮ ವಿಷಯವಾಗಿರುವುದರಿಂದ, ವಿಜಯ್ ಅವರ ಮಾತುಕತೆ ಪ್ರಯತ್ನ ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವುದು ಅಥವಾ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಹೈಕಮಾಂಡ್ ಪರಿಸ್ಥಿತಿ, ಪಕ್ಷದ ಹಿತಾಸಕ್ತಿ ಮತ್ತು ಸಂಘಟನೆಯ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡೇ ನಿರ್ಧಾರ ಕೈಗೊಳ್ಳುತ್ತದೆ. ಆ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಅವರು ತಿಳಿಸಿದರು.

By Ravikumar - 08-08-2026


Ads in Post