Search


ರೌಡಿಗಳ ಹೆಡೆಮುರಿ ಕಟ್ಟಲು ಸಿಎಂ ಡಿಕೆಶಿ ಖಡಕ್‌ ಆದೇಶ..!

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಡಿಕೆ ಶಿವಕುಮಾರ್‌ ಆಡಳಿತ ಯಂತಕ್ಕೆ ಸಾಣೆ ಹಿಡಿಯುವ ಕೆಲಸ ಮಾಡಿದ್ದಾರೆ. ವಿಧಾನ ಸೌಧದಲ್ಲಿ ಹಿರಿಯ ಐಪಿಎಸ್‌ ಮತ್ತು ಐಎಎಸ್‌ ಅಧಿಕಾರಿಗಳ ಸಭೆ ನಡೆಸಿದ ಸಿಎಂ, ರಾಜ್ಯದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಹಾಗೂ ರೌಡಿಗಳ ಹೆಡೆಮುರಿ ಕಟ್ಟುವಂತೆ ಖಡಕ್‌ ಆದೇಶ ಹೊರಡಿಸಿದ್ದಾರೆ.

ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದ ಡಿಕೆಶಿ, ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 6 ಪ್ರಮುಖ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು ಎಂದಿರುವ ಸಿಎಂ, ಯಾವುದೇ ಕಾರಣಕ್ಕೂ ಆಡಳಿತ ಹಾದಿ ತಪ್ಪಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ರೌಡಿಗಳ ಹೆಡೆಮುರಿ ಕಟ್ಟಲು ಪೊಲೀಸರಿಗೆ ಸೂಚನೆ..!

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗಡೆದಂತೆ ನೋಡಿಕೊಳ್ಳಲು ಸಿಎಂ ಆದೇಶಿಸಿದ್ದು, , ‘ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು’ ಎಂದಿದ್ದಾರೆ. ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು. ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಮುಕ್ತವಾಗಿ ಕೆಲಸ ಮಾಡಿ ಎಂದು ಐಪಿಎಸ್ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ.

CM D.K. Shivakumar chairs meeting of senior officials - Bengaluru, Karnataka, Vidhana Soudha, Chief Minister, Deputy Chief Minister, senior officials, police officers, forest officers, administrative meeting, governance.
 
ಭ್ರಷ್ಟಾಚಾರಕ್ಕೆ ಕಡಿವಾಣ, ಅಧಿಕಾರಿಗಳಿಗೆ ಸಿಎಂ ಕಿವಿಮಾತು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ‘ರಾಜ್ಯದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿ ದುರ್ಬಳಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ತಕ್ಷಣವೇ ಬ್ರೇಕ್ ಹಾಕಿ, ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು’ ಎಂದು ಗುಡುಗಿದ್ದಾರೆ. ಪ್ರತಿಯೊಬ್ಬ ಅಧಿಕಾರಿಯೂ ನಿಮ್ಮ ಆತ್ಮಸಾಕ್ಷಿ ಒಪ್ಪುವ ಹಾಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ ಜನ ಮೆಚ್ಚುವಂತೆ ಕೆಲಸ ಮಾಡುವ ಮೂಲಕ ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ, ನೀವೂ ಉತ್ತಮ ಹೆಸರು ಗಳಿಸಿ ಎಂದು ಕರೆ ನೀಡಿದ್ದಾರೆ.
 

By Ravikumar - 04-06-2026


Ads in Post