Search


ಹಾಸ್ಟೆಲ್‌ಗೆ ದಿಡೀರ್ ಭೇಟಿ ಕೊಟ್ಟ ಸಿಎಂ; ಮಕ್ಕಳ ಜೊತೆ ಮುದ್ದೆ ಊಟ

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಯಾವುದೇ ಪೂರ್ವ ಸೂಚನೆ ನೀಡದೆ ಹಾಸ್ಟೆಲ್‌ಗೆ ತೆರಳಿದ ಸಿಎಂ, ವಿದ್ಯಾರ್ಥಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ನಾಳೆ ಕನಕಪುರದಲ್ಲಿ ಕುಟುಂಬದ ಖಾಸಗಿ ಕಾರ್ಯಕ್ರಮವಿರುವ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಇಂದು ಕನಕಪುರದ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಅವರು ಬಿಸಿಎಂ ಹಾಸ್ಟೆಲ್‌ಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು.

ಹಾಸ್ಟೆಲ್‌ಗೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳ ವಸತಿ, ಊಟ ಸೇರಿದಂತೆ ವಿವಿಧ ವ್ಯವಸ್ಥೆಗಳ ಕುರಿತು ಸಿಎಂ ಪರಿಶೀಲನೆ ನಡೆಸಿದರು. ಬಳಿಕ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿಗಳೊಂದಿಗೆ ಮುದ್ದೆ ಊಟ ಸವಿದ ಅವರು, ಕೆಲಕಾಲ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದರು. ಹಾಸ್ಟೆಲ್‌ನಲ್ಲಿ ಕಲ್ಪಿಸಿರುವ ಸೌಲಭ್ಯಗಳು ಹಾಗೂ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದರು. ಈ ವೇಳೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಿಎಂಗೆ ಸಾಥ್ ನೀಡಿದರು.

By Ravikumar - 14-09-2026


Ads in Post