Search


ಬೆಂಗಳೂರುದಲ್ಲಿ ಮತ್ತೆ ಕೊರೊನಾ ಆತಂಕ;4 ಮಂದಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು: ನಗರದಲ್ಲಿ ಮತ್ತೆ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರೆಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಸೌಮ್ಯ ಲಕ್ಷಣಗಳಿರುವ ಕಾರಣ ಮನೆ ಐಸೋಲೇಷನ್ ಹಾಗೂ ವೈದ್ಯಕೀಯ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಸೋಂಕಿತರ ಪ್ರಯಾಣ ಹಾಗೂ ಸಂಪರ್ಕದ ಮಾಹಿತಿಯನ್ನು ಪರಿಶೀಲಿಸುತ್ತಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ (ಕಾಂಟ್ಯಾಕ್ಟ್ ಟ್ರೇಸಿಂಗ್) ಕಾರ್ಯ ಆರಂಭಿಸಿದೆ. ಅಗತ್ಯವಿರುವವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ.

ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಆತಂಕ ಬೇಡ ಎಂದು ಮನವಿ ಮಾಡಿದ್ದು, ಜ್ವರ, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಮೊದಲಾದ ಲಕ್ಷಣಗಳು ಕಂಡುಬಂದರೆ ತಕ್ಷಣ ಸಮೀಪದ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಿದೆ. ಜೊತೆಗೆ ವಯೋವೃದ್ಧರು, ಗರ್ಭಿಣಿಯರು, ದೀರ್ಘಕಾಲದ ಕಾಯಿಲೆಗಳಿರುವವರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಹೆಚ್ಚು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

ಇನ್ನು ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದೂ, ಅರೋಗ್ಯ ಇಲಾಖೆ ಜನಸಂದಣಿ ಇರುವ ಸ್ಥಳಗಳಲ್ಲಿ ಅಗತ್ಯವಿದ್ದರೆ ಮಾಸ್ಕ್ ಧರಿಸುವುದು, ಕೈಗಳನ್ನು ಸ್ವಚ್ಛವಾಗಿಡುವುದು ಹಾಗೂ ಅನಾರೋಗ್ಯ ಇದ್ದರೆ ಸಾರ್ವಜನಿಕ ಸ್ಥಳಗಳಿಗೆ ತೆರಳುವುದನ್ನು ತಪ್ಪಿಸುವಂತೆ ಸೂಚಿಸಿದೆ.ರಾಜ್ಯದಲ್ಲಿ ಸದ್ಯ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದರೆ ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ತಿಳಿಸಿದ್ದಾರೆ

By Ravikumar - 26-07-2026


Ads in Post