Search


ಸಿಎಂ ಹುದ್ದೆಗೇರಿದ ಬಳಿಕ ಮೊದಲ ಬಾರಿಗೆ ಮೋದಿ ಭೇಟಿಯಾದ ಡಿ.ಕೆ ಶಿವಕುಮಾರ್‌

ನವದೆಹಲಿ: ನೀತಿ ಆಯೋಗದ ಸಭೆ ಸೇರಿದಂತೆ ಹಲವು ಕಾರ್ಯಕ್ರಮಗಳ ನಿಮಿತ್ತ ದೆಹಲಿಗೆ ತೆರಳಿದ್ದ ನೂತನ ಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಪ್ರಧಾನಿ ನರೇಂದ್ರ ಮೋದಿಯವರನ್ನ(PM Narendra Modi) ಭೇಟಿಯಾಗಿದ್ದಾರೆ. ಈ ಭೇಟಿಯ ವೇಳೆ ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ನೀಡುವಂತೆ ಸಿಎಂ ಡಿಕೆಶಿ ಮನವಿ ಮಾಡಿದ್ದಾರೆ.

ಕರ್ನಾಟಕದ (Karnataka) ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೇ ಮೊದಲು. ನೀತಿ ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಈ ಉನ್ನತ ಮಟ್ಟದ ಭೇಟಿ ನಡೆದಿದೆ.

ಮೊದಲ ಭೇಟಿಯಲ್ಲೇ ಪ್ರಧಾನಿ ಅವರಿಗೆ ಜಗದ್ಗುರು ಬಸವಣ್ಣನವರ ಭವ್ಯವಾದ ಪುತ್ಥಳಿಯನ್ನು ನೀಡಿ ಮುಖ್ಯಮಂತ್ರಿಗಳು ಗೌರವಿಸಿದರು. ಈ ಸೌಜನ್ಯಯುತ ಭೇಟಿಯ ಸಂದರ್ಭದಲ್ಲಿ ರಾಜ್ಯದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಪೂರ್ಣ ಸಹಕಾರ ಹಾಗೂ ಬೆಂಬಲವನ್ನು ನೀಡುವಂತೆ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.
 

By Ravikumar - 11-06-2026


Ads in Post