ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಇಂದು ಬೆಂಗಳೂರಿನ 42ನೇ ಜನಪ್ರತಿನಿಧಿಗಳಿಗೆ ಹಾಜರಾದರು. ಈ ವೇಳೆ ನ್ಯಾಯಾಲಯ ಇಬ್ಬರಿಗೂ ಷರತ್ತುಬದ್ದ ಜಾಮೀನು ನೀಡಿದ್ದು, ತಲಾ 10 ಸಾವಿರ ಷ್ಯೂರಿಟಿ ನೀಡುವಂತೆ ಸೂಚಿಸಿದೆ.
2025ರ ಆಗಸ್ಟ್ 14ರಂದು ಪ್ರಿಯಾಂಕ್ ಖರ್ಗೆ ತಮ್ಮ ‘X’ ಖಾತೆಯಲ್ಲಿ RSS ಸದಸ್ಯರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಇದೇ ವೇಳೆ, ನಲಪಾಡ್ ಅವರು ಯೂಟ್ಯೂಬ್ ಚಾನೆಲ್ವೊಂದರ ಸಂದರ್ಶನದಲ್ಲಿ ಆರ್ಎಸ್ಎಸ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇಬ್ಬರ ವಿರುದ್ಧ ಬೆಂಗಳೂರಿನ ಸಿದ್ದಾಪುರದ RSS ಕಾರ್ಯಕರ್ತ ಎ ತೇಜಸ್ ದೂರು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಕಳೆದ ತಿಂಗಳು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ನಲಪಾಡ್ಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನಲೆ ಇಂದು ಸಚಿವ ಖರ್ಗೆ ಮತ್ತು ನಲಪಾಡ್ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗಿದ್ದು, ನ್ಯಾಯಾಲಯ ಇಬ್ಬರಿಗೂ ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದೆ, ಹಾಗೂ ತಲಾ 10 ಸಾವಿರ ಶ್ಯೂರಿಟಿ ನೀಡುವಂತೆ ನ್ಯಾಯಾಲಯ ಸೂಚಿಸಿದೆ.