Search


ದೇವರಾಜು ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ನಿಧನ; ಕಂಬನಿ ಮಿಡಿದ ರಾಹುಲ್‌...!

ಬೆಂಗಳೂರು : ಮಾಜಿ ಸಿಎಂ ದಿವಂಗತ ದೇವರಾಜು ಅರಸು ಅವರ ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಹೃದಯಾಘಾತದಿಂದ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಸೂರಜ್‌ ಹೆಗ್ಡೆ ಅವರ ನಿಧನಕ್ಕೆ ರಾಹುಲ್‌ ಗಾಂಧಿ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

ಭಾನುವಾರ ರಾತ್ರಿ ಸೂರಜ್‌ ಹೆಗ್ಡೆ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತವಾಗಿದ್ದು, ಅವರನ್ನು ತಕ್ಷಣವೇ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದು, ಪಕ್ಷದ ಸಂಘಟನೆಯಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 

ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜಕೀಯ ಜೀವನ ಆರಂಭಿಸಿದ್ದ ಸೂರಜ್ ಹೆಗ್ಡೆ , ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಸದ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ರಾಹುಲ್‌ ಸೇರಿದಂತೆ ಕಾಂಗ್ರೆಸ್‌ ಪ್ರಮುಖರ ನಿಧನ...!

ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದು, " ಸೂರಜ್‌ ಹೆಗ್ಡೆಯವರಿಗೆ ಯುವ ಕಾಂಗ್ರೆಸ್‌ ಕೇವಲ ಒಂದು ಹುದ್ದೆಯಾಗಿರಲಿಲ್ಲ, ನ್ಯಾಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ ಹೊಂದಿರುವ ಬದ್ದತೆಯನ್ನ ಭಾರತದ ಯುವಕರಿಗೆ ತಲುಪಿಸಲು ಮಾರ್ಗದರ್ಶಕರಾಗಿದ್ದರು. ಅವರ ನಿಧನ ಕಾಂಗ್ರೆಸ್‌ಗೆ ತುಂಬಲಾರದ ನಷ್ಟ ಉಂಟು ಮಾಡಿದ್ದು, ಅವರ ನಿಧನಕ್ಕೆ ಸಂತಾಕ ಕೋರುತ್ತೇನೆ ಎಂದು ತಮ್ಮ ಎಕ್ಷ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಸೂರಜ್‌ ಹೆಗ್ಡೆ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. 

ಇನ್ನು ಡಿಕೆ ಶಿವಕುಮಾರ್‌ ಕೂಡ ಸಂತಾಪ ಸೂಚಿಸಿದ್ದು "ಸೂರಜ್‌ ಅವರ ಅಗಲಿಕೆಯ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಗಿದೆ. ಇಷ್ಟು ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅವರು ತಮ್ಮ ತಾತ ದೇವರಾಜ ಅರಸು ಅವರ ಹಾದಿಯಲ್ಲೇ ಸಾಗುತ್ತಾ, ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದ ಪ್ರಬಲ ನಾಯಕನನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಾಂಗ್ರೆಸ್ ನಾಯಕರು ಪ್ರಾರ್ಥಿಸಿದ್ದಾರೆ.

By Ravikumar - 08-06-2026


Ads in Post