Search


ಧರ್ಮಸ್ಥಳ ಪ್ರಕರಣ ತನಿಖಾಧಿಕಾರಿಗಳ ಕಾರು ಅಪಘಾತ.. ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ದೇಶದ ಗಮನ ಸೆಳೆದಿದ್ದ ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ (SIT) ತಂಡ ತೆರಳುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ. ಚಾರ್ಮಡಿ ಘಾಟ್‌ನಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗುತ್ತಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಅಧಿಕಾರಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Mass Burial Case)  ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಬೆಳ್ತಂಗಡಿ ಎಸ್‌ ಐಟಿ ಕಚೇರಿಯಿಂದ ಎಸ್ಪಿ ಸಿ.ಎ ಸೈಮನ್, ಇನ್ಸ್‌ಪೆಕ್ಟ‌ರ್ ಕುಸುಮಾಧರ್, ಸಿಬ್ಬಂದಿ ಪಿಸಿ ಮಂಜುನಾಥ್ ಭೇಟಿ ಮಾಡಲು ಚಿಕ್ಕಮಗಳೂರು ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ. 

ಅಪಘಾತ ಸಂಭವಿಸಿದ ಬಳಿಕ ಎಸ್‌ಪಿ ಸಿ.ಎ. ಸೈಮನ್ ಮತ್ತು ಅವರ ತಂಡ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ( Belthangady Traffic Police Station) ಆಗಮಿಸಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಕುರಿತು ದೂರು ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By Ravikumar - 17-06-2026


Ads in Post