Search


ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ದಿಲೀಪ್ ರಾಜ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದರೆ

ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ದಿಲೀಪ್ ರಾಜ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ದಿಲೀಪ್ ರಾಜ್ ಅವರಿಗೆ ತೀವ್ರ ಹೃದಯಘಾತವಾಗಿದ್ದು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿದರು ಕೂಡ ಅಷ್ಟು ಹೊತ್ತಿಗೆ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.

ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಇತ್ತೀಚೆಗೆ ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿ ಅಪಾರ ಜನಮನ್ನಣೆ ಗಳಿಸಿದ್ದರು. ಅಷ್ಟೇ ಅಲ್ಲದೆ ಡಿ.ಆರ್ ಕ್ರಿಯೆಷನ್ ಮೂಲಕ ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು. ಜೊತೆಗೆ ಕಂಠದಾನ ಕಲಾವಿದರಾಗಿಯೂ ಸಕ್ರಿಯರಾಗಿದ್ದರು.

ಆದರೆ ದಿಲೀಪ್ ರಾಜ್ ಅವರ ಅಕಾಲಿಕ ನಿಧಾನದಿಂದ ಕಿರುತೆರೆ ದಿಗ್ಬ್ರಮೆಗೆ ಒಳಗಾಗಿದ್ದು. ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ, ನಿರ್ಮಾಪಕನನ್ನು ಕಳೆದುಕೊಂಡಂತಾಗಿದೆ.

ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ, ದಿಲೀಪ್ ರಾಜ್ ಅಣ್ಣನ ಮಗನಿಂದ ಪೂಜಾ ಕೈಂಕರ್ಯ ನೆರವೇರಿಸಲಾಯಿತು

ದಿಲೀಪ್ ರಾಜ್ ಅಂತ್ಯಕ್ರಿಯೆಯಲ್ಲಿ ನಟ ಸೃಜನ್ ಲೋಕೇಶ್, ನಟಿ ಅನುಪ್ರಭಾಕರ್, ರಘುಮುಖರ್ಜಿ, ಕಾಮಿಡಿ ಕಿಲಾಡಿ ಖ್ಯಾತಿಯ ಜಗಪ್ಪ, ಸೃಜನ್, ಮಂಜುಪಾವಗಡ, ಹುಲಿ ಕಾರ್ತಿಕ್ ಸೇರಿ ಕಿರುತೆರೆ ಕಲಾವಿದರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಭಾಗಿಯಾಗಿದ್ದರು. ಈ ವೇಳೆ ಪಾರ್ಥಿವ ಶರೀರದ ಎದುರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.

ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ `ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರಾವಾಹಿಗಳಲ್ಲೂ ನಟಿಸಿದ್ದರು. 

 

ರವಿಕುಮಾರ್ ನ್ಯೂಸ್ ಡೆಸ್ಕ್ 

By thebigbulletin.com - 13-05-2026


Ads in Post