ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದರು. ಧಾರ್ಮಿಕ ನಾಯಕರು ಸೇರಿ ಬಿಜೆಪಿಯ ಉಚ್ಛಾಟಿತ ಶಾಸಕರೂ ಉಪಸ್ಥಿತರಿದ್ದರು.
ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ದೀರ್ಘದಂಡ ನಾಮಸ್ಕಾರ ಮಾಡಿದರು. ಬಳಿಕ ಬಳಿಕ ವೇದಿಕೆ ಮೇಲೆಯೇ ಇರಿಸಿದ್ದ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.