Search


ದುನಿಯಾ ವಿಜಯ್–ನಾಗರತ್ನ ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು; 2 ಕೋಟಿ ಜೀವನಾಂಶ

ಬೆಂಗಳೂರು: ನಟ ದುನಿಯಾ ವಿಜಯ್ ಮತ್ತು ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಚ್ಛೇದನ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಅಂತಿಮ ತೀರ್ಪು ನೀಡಿದೆ.

ನ್ಯಾ. ಕೆ. ಸಿಂಗ್ ಮತ್ತು ನ್ಯಾ. ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ. ಇದೇ ವೇಳೆ ನಾಗರತ್ನ ಅವರಿಗೆ 2 ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ನಟ ದುನಿಯಾ ವಿಜಯ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಿಜಯ್ ಅವರ ಸಾಮಾಜಿಕ ಸ್ಥಾನಮಾನ, ವೃತ್ತಿಪರ ಗಳಿಕೆ ಹಾಗೂ ಹಣಕಾಸಿನ ಸ್ಥಿತಿಗತಿಗಳನ್ನು ಕೂಲಂಕುಷವಾಗಿ ಪರಿಗಣಿಸಿ ವಿಭಾಗೀಯ ಪೀಠ ಜೀವನಾಂಶದ ಮೊತ್ತವನ್ನು ನಿಗದಿಪಡಿಸಿದೆ.

ನಾಗರತ್ನ ಹಾಗೂ ಅವರ ಮೂವರು ಮಕ್ಕಳ ಭವಿಷ್ಯ ಮತ್ತು ಜೀವನ ನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು 2 ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಈ ತೀರ್ಪಿನೊಂದಿಗೆ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನುಬದ್ಧವಾಗಿ ಅಂತ್ಯ ದೊರೆತಂತಾಗಿದೆ.

By Ravikumar - 03-09-2026


Ads in Post