Search


ರಾಜ್ಯದಲ್ಲಿ ಎಬೋಲಾ ಭೀತಿ ; ವಿದೇಶದಿಂದ ಬರುವವರಿಗೆ 21 ದಿನ ಕ್ವಾರಂಟೈನ್‌

ಬೆಂಗಳೂರು : ಆಫ್ರಿಕಾದ ಕೆಲ ರಾಷ್ಟ್ರಗಳಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಕ್ವಾರಂಟೈನ್ ಹಾಗೂ ರೋಗಲಕ್ಷಣ ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ವರದಿಮಾಡಿಕೊಳ್ಳಲು ಸೂಚಚಿಸಲಾಗಿದೆ.

ಆಫ್ರಿಕಾದ ದೇಶಗಳಲ್ಲಿ ಹರಡುತ್ತಿರುವ ಭೀಕರ 'ಎಬೋಲಾ'  ಸಾಂಕ್ರಾಮಿಕದ ಆತಂಕ ವಿಶ್ವಕ್ಕೆ ಎದುರಾಗಿದೆ, ಮೇ 17, 2026 ರಂದು ವಿಶ್ವ ಆರೋಗ್ಯ ಸಂಸ್ಥೆಯು ಈ ಸೋಂಕನ್ನು ‘ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ’ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲೂ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಚಿಕಿತ್ಸೆಗೆ ಆಸ್ಪತ್ರೆ ಕಾಯ್ದಿರಿಸಿದ ಸರ್ಕಾರ

ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರವು ಬೆಂಗಳೂರು ಮತ್ತು ಮಂಗಳೂರಿನಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ (RGICD)ಯನ್ನು ಐಸೋಲೇಷನ್ ಕೇಂದ್ರವಾಗಿ ಮತ್ತು ಎಪಿಡೆಮಿಕ್ ಡಿಸೀಸ್ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ನಿಗದಿಪಡಿಸಲಾಗಿದೆ. ಇನ್ನು ಮಂಗಳೂರಿನಲ್ಲಿ ಶ್ರೀನಿವಾಸ್ ಪೋರ್ಟ್ ಆಸ್ಪತ್ರೆ (NMPA) ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ. ವಿದೇಶದಿಂದ ಬರುವವರಿಗೆ ವಿಮಾನ ನಿಲ್ದಾಣಗಳಲ್ಲೇ ತಪಾಸಣೆ ಮಾಡಲಾಗುತ್ತಿದ್ದು, ಶಂಕಾಸ್ಪದ ಪ್ರಕರಣಗಳ ಮಾದರಿಗಳನ್ನು ಬೆಂಗಳೂರಿನ ಎನ್.ಐ.ವಿ (NIV) ಮೂಲಕ ಪುಣೆಯ ಮುಖ್ಯ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಲಾಗುತ್ತದೆ.

ಮುಂಜಾಗ್ರತಾ ಕ್ರಮ

ಪ್ರತ್ಯೇಕ ಕ್ವಾರಂಟೈನ್, ಐಸೋಲೇಷನ್, ರೆಫರಲ್ ಌಂಬುಲೆನ್ಸ್ ವ್ಯವಸ್ಥೆ, ಪಿಪಿಇ ಕಿಟ್​ಗಳು, ಅಗತ್ಯ ಔಷಧ ಸಂಗ್ರಹ. ಱಪಿಡ್ ರೆಸ್ಪಾನ್ಸ್ ತಂಡಗಳನ್ನು ಸಕ್ರಿಯಗೊಳಿಸುವುದು, ಚಿಕಿತ್ಸೆ ನೀಡಲು ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡುವುದು ಸೇರಿದಂತೆ ಸೋಂಕು ಹರದಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಕೈಗೊಂಡಿದೆ.

ಪ್ರಯಾಣಿಕರಿಗೆ ಸೂಚನೆ


ಸಾರ್ವಜನಿಕರು ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಮತ್ತು ಕೇವಲ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ. ಎಬೋಲಾ ಪೀಡಿತ ದೇಶಗಳಿಂದ (DRC ಮತ್ತು ಉಗಾಂಡಾ) ಭಾರತಕ್ಕೆ ಮರಳಿದ ಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಆರೋಗ್ಯ ಇಲಾಖೆಯ ಮೇಲ್ವಿಚಾರಣೆಯಲ್ಲಿ ಇರಬೇಕು. ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ವರದಿ ಮಾಡಬೇಕು. ತ್ವರಿತ ಪ್ರತಿಕ್ರಿಯೆ ತಂಡಗಳನ್ನು (RRT) ಈಗಾಗಲೇ ಸಜ್ಜುಗೊಳಿಸಲಾಗಿದೆ.


 

By thebigbulletin.com - 23-05-2026


Ads in Post