ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ ಶಾಕ್ ಎದುರಾಗಿದ್ದು, ಅವರ ನಿವಾಸ ಸೇರಿದಂತೆ ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರದ ವಿವಿಧೆಡೆ ಒಟ್ಟು 15 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಿಢೀರ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸಂಬಂಧಿ ಹಾಗೂ ಅಧಿಕಾರಿ ಮಂಜುನಾಥ್‌ಗೆ ಸಂಬಂಧಿಸಿದ ಅಬಕಾರಿ ಅಕ್ರಮ ಪ್ರಕರಣದ ತನಿಖೆಯ ಭಾಗವಾಗಿ ಈ ದಾಳಿ ನಡೆದಿದೆ ಎನ್ನಲಾಗಿದೆ.
18 ಅನಧಿಕೃತ ಬಾರ್ ಲೈಸೆನ್ಸ್‌ಗಳಿಗೆ ನೆರವು ನೀಡಿರುವ ಆರೋಪದ ಜೊತೆಗೆ ಅಕ್ರಮ ವಿದೇಶಿ ಹಣ ಹೂಡಿಕೆ ಮತ್ತು ಮನಿ ಲಾಂಡ್ರಿಂಗ್ ಶಂಕೆಯ ಹಿನ್ನೆಲೆಯಲ್ಲಿ ಇ.ಡಿ ಪರಿಶೀಲನೆ ನಡೆಸುತ್ತಿದೆ. ಈ ಹಿಂದೆ ಪತ್ತೆಯಾಗಿದ್ದ ಸುಮಾರು 3 ಕೋಟಿ ರೂಪಾಯಿ ಅಕ್ರಮ ವಿದೇಶಿ ಹಣದ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಇದೀಗ ಈ ಶೋಧ ಕಾರ್ಯಾಚರಣೆ ನಡೆದಿದೆ ಎಂದು ತಿಳಿದುಬಂದಿದೆ.