ಖ್ಯಾತ ನಟಿ ಶುಭ ಪೂಂಜಾ ಅವರ ವೈವಾಹಿಜ ಜೀವನದಲ್ಲಿ ಬಿರುಗಾಳಿ ಬೀಸಿದೆ, ಮದುವೆಯಾದ 4 ವರ್ಷಕ್ಕೆ ದಂಪತಿಗಳಿಬ್ಬರು ದಾಂಪತ್ಯ ಜೀವನಕ್ಕೆ ಗುಡ್ಬಾಯ್ ಹೇಳಲು ನಿರ್ಧರಿಸಿದ್ದು. ಪರಸ್ಪರ ಒಪ್ಪಿಗೆಯ ಮೇರೆಗೆ ದಂಪತಿಗಳಿಬ್ಬರು ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ (Bigg Boss) ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. 2022ರ ಜನವರಿಯಲ್ಲಿ ನಟಿ ಶುಭ ಪೂಂಜಾ, ಸುಮಂತ್ ಬಿಲ್ಲವ ಎಂಬುವವರನ್ನ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗಳಿಬ್ಬರು ಅತ್ಯಂತ ಖುಷಿಯಾಗಿ ಕಾಲ ಕಳೆದಿದ್ದರು, ಇದೀಗ ಏಕಾಏಕಿ ಬೇರೆ ಆಗಲು ನಿರ್ಧಿರಿಸಿ, ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್ಗೆ ಹಾಜರಾಗುವ ಸಾಧ್ಯತೆ ಇದೆ. ಆದರೆ, ಇಬ್ಬರ ನಡುವಿನ ವಿಚ್ಛೇದನಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ. ಈಗಾಗಲೇ ಶುಭಾ ಅವರು ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ.
ನಟಿ ಶುಭ ಪೂಂಜಾ ಒಂದು ಕಾಲದಲ್ಲಿ ಕನ್ನಡ ಬೇಡಿಕೆಯ ನಟಿಯಾಗಿದ್ದರು, ಮೊಗ್ಗಿನ ಮನಸು ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ, ಕಂಠಿ, ತಾಕತ್, ಜೈ ಮಾರುತಿ 800 ಸೇರಿದಂತೆ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ, ಅಷ್ಟೇ ಅಲ್ಲದೆ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ಶುಭಾ ಪೂಂಜಾ ತಮ್ಮ ಮುಗ್ಧ ಹಾಗೂ ಚುರುಕಿನ ನಡವಳಿಕೆಯಿಂದ ಅಪಾರ ಪ್ರೇಕ್ಷಕರ ಗಮನ ಸೆಳೆದಿದ್ದರು. ಸದಾ ನಗುನಗುತ್ತಾ ಇರುತ್ತಿದ್ದ ಶುಭಾ ಪೂಂಜಾ ಅವರ ದಾಂಪತ್ಯ ಜೀವನದಲ್ಲಿ ಈ ರೀತಿಯ ಬಿರುಗಾಳಿ ಎದ್ದಿರುವುದು ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ.