Search


ಸಿಡಿದೆದ್ದ ಸಿದ್ದು ಬೆಂಬಲಿಗರು ; "ಯಾವನು ಹೈಕಮಾಂಡ್‌" ಎಂದು ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯರ ಪದತ್ಯಾಗದ ಸುದ್ದಿ ದಟ್ಟವಾಗುತ್ತಿರುವ ನಡುವೆ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರತಿಭಟನೆಗೆ ಇಳಿದಿದ್ದಾರೆ. ಹೈಕಮಾಂಡ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳು 2028ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದು. ಅದಕ್ಕೆ ಸಿದ್ದರಾಮಯ್ಯ ಕೂಡ ಸಿದ್ದರಾಗಿದ್ದಾರೆ. ನಾಳೆ ಬೆಳಿಗ್ಗೆ 8 ಗಂಟೆಗೆ ಸಚಿವರು, ಆಪ್ತ ಶಾಸಕರು ಮತ್ತು ಪರಿಷತ್‌ ಸದಸ್ಯರಿಗೆ ಔತಣ ಕೂಡ ಆಯೋಜಿಸಿರುವ ಸಿದ್ದರಾಮಯ್ಯ, 10:30ಕ್ಕೆ ರಾಜ್ಯಪಾಲರ ಭೇಟಿಗೆ ಅವಕಾಶ ಕೋರಿದ್ದಾರೆ. ಈ ವೇಳೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಆದರೆ ಇದರಿಂದ ಅವರ ಬೆಂಬಲಿಗರು ಮತ್ತು ಅಹಿಂದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ನಿರ್ಧಾರದ ವಿರುದ್ಧ ನಿಗಿ ನಿಗಿ ಎನ್ನುತ್ತಿರುವ ಅಭಿಮಾನಿಗಳು ಸಿದ್ದರಾಮಯ್ಯನವರ ನಿವಾಸದ ಮುಂದೆ ಜಮಾಯಿಸಿ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕಪಾಠ..!

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತದೆ ಎಂದು ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಆ ಪಕ್ಷಕ್ಕೆ ಹಿನ್ನಡೆಯಾಗಿತ್ತು ಎಂದು ಉದಾಹರಿಸಿದ ಅಭಿಮಾನಿಗಳು, ಇದೇ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೂ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ. ಸಿದ್ದರಾಮಯ್ಯ ಒಬ್ಬ ಜನಪ್ರಿಯ ನಾಯಕರು ಮತ್ತು ಅಹಿಂದ ವರ್ಗದ ಬಲ ಎಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದೇ ಸಿದ್ದರಾಮಯ್ಯರಿಂದ, ಒಂದು ವೇಳೆ ಸಿಎಂ ಸ್ಥಾನದಿಂದ ಅವರನ್ನ ಕೆಳಗಿಳಿಸಿದರೆ, 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೆ ಎಂದಿದ್ದಾರೆ. ಇನ್ನು ಆಕ್ರೋಶ ವ್ಯಕ್ತಪಡಿಸುತ್ತಿದ್ದ ಅಭಿಮಾನಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

By Ravikumar - 27-05-2026


Ads in Post