Search


ಬಿಡದಿಯಲ್ಲಿ ಭೂಮಿ ಸರ್ವೆ ಮಾಡಲು ಬಂದ ಅಧಿಕಾರಿಗಳಿಗೆ ಅಟ್ಟಾಡಿಸಿಕೊಂಡು ಹೊಡೆದ ರೈತರು

ಬೆಂಗಳೂರು ದಕ್ಷಿಣ : ಬಿಡದಿ ಟೌನ್​ಶಿಪ್ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಇಂದು ಉಗ್ರ ರೂಪಕೆ ತಿರುಗಿದೆ. ರೈತರ ಜಮೀನಿಗೆ ಎಂದು ಮಂಡಲಹಳ್ಳಿಗೆ ಬಂದಿದ್ದ ಸರ್ಕಾರಿ ಅಧಿಕಾರಿಗಳನ್ನ ರೈತರು ಅಟ್ಟಡಿಸಿಕೊಂಡು ಪೊರಕೆಯಲ್ಲಿ ಹೊಡೆದಿದ್ದಾರೆ. ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಎಚ್ಚರಿಕೆ ನೀಡಿದ್ದರು. ಎಚ್ಚರಿಕೆ ಹೊರತಾಗಿಯೂ ಸರ್ವೇ ನಡೆಸಲು ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ. ಇನ್ನು ಈ ಘಟನೆ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ರೈತರು ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ.

ಬಿಡದಿ ಟೌನ್​ಶಿಪ್ ನ್ನು ವಿರೋಧಿಸುತ್ತಿರುವ ಸ್ಥಳೀಯ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ಕೆರಳಿದ್ದು, ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಸರ್ವೆಗೆ ಬಂದ ಅಧಿಕಾರಿಗಳ ಕಾರನ್ನು ಸುತ್ತುವರಿದು, ಪೊರಕೆ, ಕಲ್ಲುಗಳಿಂದ ಥಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಪೊಲೀಸರು ಇದ್ದರೂ ರೈತರ ಆಕ್ರೋಶ ತಡೆಯಲು ಸಾಧ್ಯವಾಗಲಿಲ್ಲ. ಘಟನೆ ಬೆನ್ನಲ್ಲೇ ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಶ್ರೀನಿವಾಸ ಗೌಡ ರೈತರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಎಎಸ್ಪಿ ರಾಮಚಂದ್ರಯ್ಯ, ಡಿವೈಎಸ್ಪಿ ಗಿರೀಶ್ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಬೇಡಿ, ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ರೆ ನಾವು ಸುಮ್ಮನೆ ನೋಡ್ತಾ ಕೂರಲ್ಲ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬೇಡಿ ಎಂದು ರೈತರಿಗೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ. ಇನ್ನು ಈ ಘಟನೆ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರೈತರು ಶಾಂತಿ ಕಾಪಾಡಬೇಕು, ಯಾವುದೇ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಕರೆ ನೀಡಿದ್ದಾರೆ. ಜೊತೆಗೆ ಪೊಲೀಸರಿಗೂ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದು. ರೈತರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿದ್ದಾರೆ.

By Ravikumar - 13-07-2026


Ads in Post