Search


ಭೀಕರ ಬಸ್ ಅಪಘಾತ; ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಗೆ KSRTC ಬಸ್ ಡಿಕ್ಕಿಯಾಗಿ ಚಾಲಕ ಸಾವು

ಮಂಡ್ಯ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವರಹಳ್ಳಿ ಜಂಕ್ಷನ್‌ ಬಳಿ ನಡೆದಿದೆ.

ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಕೆಎಸ್‌ಆರ್‌ಟಿಸಿ ಬಸ್‌ ಓವರ್‌ಟೇಕ್ ಮಾಡಲು ಮುಂದಾದ ವೇಳೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್‌ನೊಳಗೆ ನುಗ್ಗಿವೆ. ಕಬ್ಬಿಣದ ಕಂಬಗಳು ಬಸ್ ಚಾಲಕನಿಗೆ ತೀವ್ರವಾಗಿ ತಗುಲಿದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಸಮೀಪದ ಬೆಳ್ಳೂರು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

By Ravikumar - 09-09-2026


Ads in Post