Search


2 ಸಾವಿರ ಮಕ್ಕಳಿದ್ದ ಶಾಲೆಗೆ ಬೆಂಕಿ : ಕೂದಲೆಳೆ ಅಂತರದಲ್ಲಿ ತಪ್ಪಿತು ಭಾರೀ ದುರಂತ

ಬೆಂಗಳೂರು: ತರಗತಿಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿರುವ ವೇಳೆಯಲ್ಲೇ ಶಾಲೆಯೊಂದಕ್ಕೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ನಡೆದಿದೆ. ಶಾರ್ಕ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದ್ದು, ವಿದ್ಯಾರ್ಥಿಗಳೆಲ್ಲರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ಕೆಂಗೇರಿ ಸಮೀಪವಿರುವ ನಾಗದೇವನಹಳ್ಳಿಯ, ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು. ಶಾಲಾ ಕಟ್ಟಡದ 3 ಮತ್ತು 4ನೇ ಮಹಡಿಯಲ್ಲಿ ಶಾರ್ಕ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಶಿಕ್ಷಕರು ಮಕ್ಕಳನ್ನ ಶಾಲೆಯಿಂದ ಹೊರಗೆ ಕಳಿಸಿದ್ದು. ಅಗ್ನಿ ಶಾಮಕ ಸಿದ್ದಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ  ಅಗ್ನಿಶಾಮಕ ಸಿಬ್ಬಂದಿ ಹಾಗೂ ಕೆಂಗೇರಿ ಪೊಲೀಸರು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಕೌಶಲ್ಯ ಶಾಲೆಯಲ್ಲಿ ಸುಮಾರು 2 ಸಾವಿರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು. ಇಂದು ಬೆಳಗ್ಗೆ 9 ಗಂಟೆಗೆ ಎಂದಿನಂತೆ ಶಾಲೆ ಪ್ರಾರಂಭವಾಗಿದೆ. 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಶಾಲಾ ಸಿಬ್ಬಂದಿ ಎಲ್ಲಾ ಮಕ್ಕಳನ್ನ ಹೊರಗೆ ಕಳುಹಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ 3ನೇ ಮಹಡಿಯನ್ನೂ ಆವರಿಸಿಕೊಂಡಿದೆ. ಘಟನೆಯ ಮಾಹಿತಿ ತಿಳಿದ ಬಳಿಕ ನೂರಾರು ಮಕ್ಕಳ ಪೋಷಕರು ಆತಂಕದಿಂದ ಶಾಲೆಗೆ ಧಾವಿಸಿದ್ದು, ಶಾಲೆಯ ಗೇಟ್ ಬಳಿ ಜಮಾಯಿಸಿದ್ದರು.

By Ravikumar - 30-05-2026


Ads in Post