ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ವಿದ್ಯಾರ್ಥಿನಿಯರು ಮಾತ್ರ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದರು, ಇದೀಗ ಈ ಸೌಲಭ್ಯವನ್ನ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿಸ್ತರಿಸಿ ಡಿಕೆಶಿ ಆದೇಶ ಹೊರಡಿಸಿದ್ದಾರೆ.
ಮೊದಲ ಕ್ಯಾಬಿನೆಟ್ ಸಭೆ ನಡೆಸಿ ಮಾಧ್ಯಮ ಸುದ್ದಿಗೋಷ್ಟಿ ನಡೆಸಿದ ಡಿಕೆಶಿ "ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ನೀಡಲಾಗುವುದು ಎಂದು ಘೋಷಿಸಿದರು. ಇದರೊಂದಿಗೆ ಬೇರೆ ಊರಿಗೆ ಹೋಗಿ ವ್ಯಾಸಂಗ ಮಾಡುವ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇನ್ನು ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಮಾಡುವುದಾಗಿ ಡಿಕೆಶಿ ಘೋಷಣೆ ಮಾಡಿದರು.
ಮುಂದುವರಿದು ಮಾತನಾಡಿದ ಡಿಕೆಶಿ "ಇವತ್ತು ಹೊಸ ದಿನ, ಹೊಸ ಕೆಲಸ, ಅವಕಾಶ ಆರಂಭಿಸುವ ದಿನ. ಇನ್ನೆರಡು ವರ್ಷಗಳಲ್ಲಿ ಹೊಸ ಅವಕಾಶ ಹುಡುಕುತ್ತಿದ್ದೇನೆ. ರಾಜ್ಯ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ. ರೈತರು, ಕಾರ್ಮಿಕರು, ಎಲ್ಲ ವರ್ಗದ ಜನರಿಗೆ ಕಳೆದ 6 ತಿಂಗಳಿಂದ ಕಾರ್ಯಕ್ರಮಗಳನ್ನ ರೂಪಿಸಿದ್ದೇನೆ ಎಂದು ಹೇಳಿದರು. ಈ ಮೂಲಕ ಮಹತ್ವದ ಕಾರ್ಯಮಗಳ ಘೋಷಣೆ ಮಾಡುವ ಸುಳಿವು ನೀಡಿದರು.
ರಾಜ್ಯದ ಜನ ನನ್ನ ಮೇಲೆ ಅಪಾರ ವಿಶ್ವಾಸ, ನಂಬಿಕೆ ಇಟ್ಟಿದ್ದಾರೆ. ಈ ಹಿಂದೆ ನನ್ನ ವಿರುದ್ಧ ಟೀಕೆಗಳು ಕೂಡ ಬಂದಿವೆ. ನನ್ನ ರಾಜಕೀಯ ಅನುಭವ ಬಳಸಿಕೊಂಡು ಕೆಲಸ ಮಾಡುತ್ತೇನೆ. ಅನೇಕ ರಾಜಕೀಯ ತಂತ್ರಗಳಿಗೂ ನಾನು ಸಿಲುಕಿದ್ದೇನೆ. ತಿಹಾರ್ ಜೈಲಿಗೂ ಸಹ ಹೋಗಿ ಬಂದಿದ್ದೇನೆ ಎಂದರು.