Search


ಡಿಕೆಶಿ ನಿವಾಸಕ್ಕೆ ಗೌತಮ್‌ ಅದಾನಿ ಭೇಟಿ; ರಾಹುಲ್‌ ಗಾಂಧಿಗೆ ಬೇಜಾರಾಗಲ್ವ ಎಂಬುದೇ ದೊಡ್ಡ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನಿವಾಸಕ್ಕೆ ದೇಶದ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ಭೇಟಿ ನೀಡಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆ ನಿವಾಸಕ್ಕೆ ಭೇಟಿ ನೀಡಿರುವ ಅದಾನಿ ಟನಲ್‌ ರೋಡ್‌ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಒಂದೆಡೆ ರಾಹುಲ್‌ ಗಾಂಧಿ ಅದಾನಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಅದಾನಿ ಹೇಳಿದಂತೆ ಮೋದಿ ಕೇಳ್ತಿದ್ದಾರೆ ಎಂದು ಆರೋಪಿಸಿದ್ದಾರೆ, ಇದರ ಬೆನ್ನಲ್ಲೇ ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಅದಾನಿ ಉದ್ದಿಮೆ ಸಂಸ್ಥೆಗಳ ಪಾರುಪತ್ಯ ಹೆಚ್ಚಾಗಿದ್ದು, ಇತ್ತೀಚೆಗೆ ಕೇರಳದಲ್ಲೂ ಕೂಡ ಅದಾನಿಗೆ ಕೆಲ ಯೋಜನೆಗಳ ಗುತ್ತಿಗೆ ನೀಡಲಾಗಿದೆ.

ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ(Gautam Adani) ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ, ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ(Tunnel Road) ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಯೋಜೆನೆಗೆ ಅದಾನಿ ಸಂಸ್ಥೆ ಅತಿ ಕಡಿಮೆ ಬಿಡ್‌ ಸಲ್ಲಿಸಿದ ಸಂಸ್ಥೆಯಾಗಿ ಹೊರ ಹೊಮ್ಮಿದ್ದು ಇತರೆ ಸಂಸ್ಥೆಗಳಿಗೆ ಹೋಲಿಸಿದರೆ ಅದಾನಿ ಸಂಸ್ಥೆಯ ಮೊತ್ತವೇ ಕಡಿಮೆಯಾಗಿದೆ.

ಟೆಂಡರ್ ಅಂತಿಮಗೊಳ್ಳುವ ಮುನ್ನವೇ ಸಂಸ್ಥೆಯು ಸುರಂಗ ಮಾರ್ಗ ಹಾದುಹೋಗುವ ಸ್ಥಳಗಳಲ್ಲಿ ಅಗತ್ಯವಿರುವ ಪ್ರಾಥಮಿಕ ಭೂ ಸಮೀಕ್ಷೆ ಹಾಗೂ ಮಣ್ಣಿನ ಗುಣಮಟ್ಟ ಪರೀಕ್ಷೆ ಸೇರಿದಂತೆ ಪ್ರಮುಖ ತಾಂತ್ರಿಕ ಪರೀಕ್ಷೆಗಳನ್ನು ಈಗಾಗಲೇ ಪೂರ್ಣಗೊಳಿಸಿದೆ. ಅದಾನಿ ಸಂಸ್ಥೆಯು ಗುತ್ತಿಗೆ ಪ್ರಸ್ತಾವನೆಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದ್ದು, ಅಧಿಕೃತವಾಗಿ ಕಾಮಗಾರಿ ವಹಿಸುವ ಸಂಬಂಧ ಮಾತುಕತೆಗಳು ನಡೆಯುತ್ತಿವೆ. ವೆಚ್ಚ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟದ ಅಂತಿಮ ಅನುಮೋದನೆ ಪಡೆಯಬೇಕಿರುವ ಹಿನ್ನೆಲೆಯಲ್ಲಿ, ಗೌತಮ್ ಅದಾನಿ ಅವರ ಈ ಭೇಟಿ ಮತ್ತು ಚರ್ಚೆ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ಹೆಚ್ಚಿನ ಗಮನ ಸೆಳೆದಿದೆ.

By Ravikumar - 23-08-2026


Ads in Post