Search


ಕಾವೇರಿ ಕದನದ ನಡುವೆ ಕರುನಾಡಿಗೆ ಗುಡ್ ನ್ಯೂಸ್; ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯೂ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಮಲೆಯಿಲ್ಲದೆ ಕಂಗಲಾಗಿರುವ ರಾಜ್ಯಕ್ಕೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ವಾಯುಭಾರ ಕುಸಿತದ ಪರಿಣಾಮ ಕರಾವಳಿ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯ ಮುನ್ಸೂಚನೆ ಇದ್ದು, ನದಿ, ಹಳ್ಳ-ಕೊಳ್ಳಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕವಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಹೀಗಾಗಿ ಸ್ಥಳೀಯ ಆಡಳಿತ ನೀಡುವ ಮುನ್ನೆಚ್ಚರಿಕೆ ಸೂಚನೆಗಳನ್ನು ಸಾರ್ವಜನಿಕರು ಪಾಲಿಸುವುದು ಅಗತ್ಯವಾಗಿದೆ.

ಮುಂದಿನ ದಿನಗಳಲ್ಲಿ ಭಾರಿ ಮಳೆ ಸಾಧ್ಯತೆ 

ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕೆಲವೆಡೆ ಮಳೆಯ ಪ್ರಮಾಣ ಕಡಿಮೆಯಾಗಬಹುದಾದರೂ, ಪ್ರತ್ಯೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಜಿಲ್ಲೆಗಳ ಜನರು ನದಿ, ಹಳ್ಳ, ಜಲಾಶಯ ಹಾಗೂ ತಗ್ಗು ಪ್ರದೇಶಗಳ ಬಳಿ ಅನಗತ್ಯವಾಗಿ ತೆರಳದಂತೆ ಎಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

By Ravikumar - 31-07-2026


Ads in Post