ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡದಲ್ಲೂ ಸಾಧಾರಣ ಮಳೆಯ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಅಲ್ಪಾವಧಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನದಲ್ಲಿ ಏರಿಳಿತ ಕಂಡುಬರಲಿದೆ. ಆದರೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ನಗರದ ಕೆಲವು ಪ್ರದೇಶಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನೂ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಗುಡುಗು-ಸಿಡಿಲಿನೊಂದಿಗೆ ಮಳೆ ಸುರಿಯುವ ಸಾಧ್ಯತೆಯಿದ್ದು, ನಗರದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರಬಹುದು.
ಇನ್ನು ಮಳೆಯ ಸಂದರ್ಭದಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಡುಗು-ಸಿಡಿಲು ಸಹಿತ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ವಾಹನ