Search


ಖರ್ಗೆಗೆ ಗೃಹ ಇಲಾಖೆ, ಯತೀಂದ್ರಗೆ ನಗರಾಭಿವೃದ್ದಿ: ನೂತನ ಸಚಿವರಿಗೆ ಖಾತೆ ಹಂಚಿಕೆ ಕಂಪ್ಲೀಟ್‌

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಖಾತೆಗಳನ್ನ ಗಂಚಿಕೆ ಮಾಡಿದ್ದು, 13 ನೂತನ ಸಚಿವರಿಗೆ ಇಲಾಖೆಗಳ ಜವಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ್‌ ಖರ್ಗೆ ಅವರ ಪುತ್ರ ಪ್ರಿಯಾಂಕ್‌ ಖರ್ಗೆಗೆ ಗೃಹ ಇಲಾಖೆ ನೀಡಿದ್ದು, ಉಳಿತ ಇತರ ಸಚಿವರಿಗೂ ಆಯಕಟ್ಟಿನ ಖಾತೆಗಳನ್ನ ನೀಡಲಾಗಿದೆ, ಜೊತೆಗೆ ಮುಖ್ಯಮಂತ್ರಿಗಳು ಹಣಕಾಸು, DPAR ಸೇರಿದಂತೆ ಕೆಲ ಖಾತೆಗಳನ್ನ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

ಕೆಲವು ಸಚಿವರಿಗೆ ಹಿಂದಿನ ಸರ್ಕಾರದಲ್ಲಿ ನಿಭಾಯಿಸಿದ್ದ ಖಾತೆಗಳನ್ನ ನೀಡಿಲಾಗಿದೆ, ಆದರೆ ಪರಮೇಶ್ವರ್‌ ಅವರು ನಿಭಾಯಿಸಿದ್ದ ಗೃಹ ಇಲಾಖೆಯನ್ನ ಪ್ರಿಯಾಂಕ್‌ ಖರ್ಗೆ ಅವರಿಗೆ ನೀಡಲಾಗಿದೆ. ಇನ್ನು  ಹಿಂದಿನ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಈಗಿನ ಡಿಸಿಎಂ ಪರಮೇಶ್ವರ್ ಅವರಿಗೆ ಕಂದಾಯ ಇಲಾಖೆ ನೀಡಲಾಗಿದೆ.

ಸಚಿವ ಕೃಷ್ಣ ಭೈರೇಗೌಡ ಅವರಿಗೆ ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ನೀಡಲಾಗಿದೆ. ಇನ್ನು ಬೆಂಗಳೂರು ನಗರಭಿವೃದ್ಧಿ ಮೇಲೆ ಕಣ್ಣಿಟ್ಟಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಇಲಾಖೆ ಜವಾಬ್ದಾರಿ ನೀಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಚಿವರ ಖಾತೆ ಹಂಚಿಕೆ ಪಟ್ಟಿ ರವಾನೆ ಮಾಡಲಾಗಿದ್ದು, ರಾಜ್ಯಪಾಲರ ಸಹಿ ಬಳಿಕ ಅಧಿಕೃತ ಗೆಜೆಟ್ ನೋಟಿಫಿಕೇಶನ್ ಪ್ರಕಟವಾಗಲಿದೆ.

ಯಾರಿಗೆ ಯಾವ ಖಾತೆ?

ಡಿಕೆ ಶಿವಕುಮಾರ್ (ಮುಖ್ಯಮಂತ್ರಿ):- ಹಣಕಾಸು ಇಲಾಖೆ, DPAR  ಮತ್ತು ಇತರೆ ಎಲ್ಲಾ ಖಾತೆಗಳು.

ಡಾ.ಜಿ.ಪರಮೇಶ್ವರ್​ (ಉಪಮುಖ್ಯಮಂತ್ರಿ) :ಕಂದಾಯ  ಹಾಗೂ ಕ್ರೀಡಾ ಹಾಗೂ ಯುವಜನ ಸಬಲೀಕರಣ.

ಪ್ರಿಯಾಂಕ್ ಖರ್ಗೆ- ಗೃಹ ಹಾಗೂ ಐಟಿ-ಬಿಟಿ ಇಲಾಖೆ

ಕೆ.ಜೆ.ಜಾರ್ಜ್- ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ

ಎಂ.ಬಿ.ಪಾಟೀಲ್- ಬೃಹತ್ & ಮಧ್ಯಮ ಕೈಗಾರಿಕೆ ಇಲಾಖೆ

ಸತೀಶ್ ಜಾರಕಿಹೊಳಿ– ಲೋಕೋಪಯೋಗಿ ಇಲಾಖೆ

ಕೃಷ್ಣ ಭೈರೇಗೌಡ– ಬೆಂಗಳೂರು ನಗರಾಭಿವೃದ್ಧಿ(ಜಿಬಿಎ)

ರಾಮಲಿಂಗಾರೆಡ್ಡಿ– ಜಲಸಂಪನ್ಮೂಲ ಇಲಾಖೆ

ಕೆ.ಹೆಚ್.ಮುನಿಯಪ್ಪ– ಆಹಾರ & ನಾಗರಿಕ ಸರಬರಾಜು ಇಲಾಖೆ

ಭೈರತಿ ಸುರೇಶ್– ಸಾರಿಗೆ ಇಲಾಖೆ

ಯು.ಟಿ.ಖಾದರ್– ಆರೋಗ್ಯ ಇಲಾಖೆ

ಡಾ.ಯತೀಂದ್ರ ಸಿದ್ದರಾಮಯ್ಯ– ನಗರಾಭಿವೃದ್ಧಿ ಇಲಾಖೆ

ಶರಣಪ್ರಕಾಶ್ ಪಾಟೀಲ್– ವೈದ್ಯಕೀಯ ಶಿಕ್ಷಣ ಇಲಾಖೆ
 

By Ravikumar - 04-06-2026


Ads in Post