ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಡಾ.ಬಿ.ಆರ್ ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂತ ಹೇಳಿದರು. ಆದರೆ, ಆಯಮ್ಮ ಯಾರೋ ಸಿಂಪಲ್ ಸುಧಾ ಅಂತೆ ನನಗೆ ಗೊತ್ತಿಲ್ಲ, ಆಯಮ್ಮನ ಗಂಡ ಪತಿ ವಾರಕ್ಕೆ 75 ಗಂಟೆ ಕೆಲಸ ಮಾಡಬೇಕು ಎಂದಿದ್ದಾರೆ. ದಿನಕ್ಕೆ 12 ಗಂಟೆ ಕೆಲಸ ಮಾಡಬೇಕು ಅಂದರೆ ನಾವೇನು ಪ್ರಾಣಿಗಳಾ? ಎಂದು ನಾರಾಯಣ ಮೂರ್ತಿ ವಿರುದ್ಧ ಕಿಡಿಕಾರಿದ್ದಾರೆ.