ಕರ್ನಾಟಕ ರಾಜಕೀಯದಲ್ಲಿ, ವಿಶೇಷವಾಗಿ ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ವಿಚಾರ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸ್ಥಳೀಯವಾಗಿ ಸೃಷ್ಟಿಯಾಗಿರುವ ಸಮಸ್ಯೆಯನ್ನು ಅಲ್ಲಿನವರೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಕೂತು ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂಬ ಸಂದೇಶವಾಗಿಯೇ ವ್ಯಾಖ್ಯಾನಿಸಲಾಗುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರವನ್ನು ರಾಹುಲ್ ಗಾಂಧಿಯವರೇ ಬಗೆಹರಿಸಬೇಕೆಂದು ಹೇಳಿರುವುದು, ಹೈಕಮಾಂಡ್ ಮೇಲೆಯೇ ನಿರ್ಧಾರದ ಹೊಣೆ ಹಾಕುವ ಪ್ರಯತ್ನವೆಂದು ಹೇಳಲಾಗುತ್ತಿದೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿ ಮಾಡಲು ಯತ್ನಿಸಿದ್ದರೂ, ಭೇಟಿ ಸಾಧ್ಯವಾಗದೆ ವಾಪಸ್ ಬಂದಿದ್ದಾರೆ.
ಪಕ್ಷಕ್ಕಾಗಿ ನಾನು ಕಸ ಗುಡಿಸಿದ್ದೇನೆ, ಬಂದು ಭಾಷಣ ಮಾಡಿ ಹೋಗಿಲ್ಲ: ಡಿಕೆಶಿ ಪರೋಕ್ಷ ಟಾಂಗ್..!