Search


ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದರೆ ಕಾಂಗ್ರೆಸ್‌ನಲ್ಲಿ ಬಡ್ತಿ ಸಿಗುತ್ತೆ; ಯತೀಂದ್ರ ವಿರುದ್ಧ ಸಿ.ಟಿ ರವಿ ಆಕ್ರೋಶ

RSS ವಿರುದ್ಧ ಕಾಂಗ್ರೆಸ್‌ ನಾಯಕರು ನೀಡುತ್ತಿರುವ ಹೇಳಿಕೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯರ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯಬೇಕು ಎಂದರೆ ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಬೇಕು ಎಂದು ಹೇಳಿದ್ದಾರೆ.

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ನ್ನು ಕೋಮುವಾದ ಮತ್ತು ಜಾತೀಯತೆಯಿಂದ ಪ್ರೇರಿತವಾಗಿರುವ ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಟೀಕಿಸಿದ್ದರು. ಆಗಸ್ಟ್ 15ರಂದು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಯತೀಂದ್ರ ಈ ಹೇಳಿಕೆ ನೀಡಿದ್ದಾರೆ. ಅವರ ಭಾಷಣದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಪರಿಷತ್‌ ನಾಯಕ ಸಿ.ಟಿ ರವಿ ʻಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುವ ಮೂಲಕ ಕಾಂಗ್ರೆಸ್‌ ನಾಯಕರು ಬಡ್ತಿ ಪಡೆಯುತ್ತಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ಶ್ರೀರಾಮಸೇನೆ ಸಾರ್ವಜನಿಕವಾಗಿ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

By Ravikumar - 19-08-2026


Ads in Post