Search


ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 10 ಸಾವಿರ ಮೀಟರ್ ಓಡಿ ಹೊಸ ಇತಿಹಾಸ ಬರೆದ ಭಾರತೀಯ ಯೋಧ!

ಗ್ಲಾಸ್ಗೋ: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ಸೇನೆಯ ಯೋಧ ಹಾಗೂ ಅಥ್ಲೀಟ್ ಗುಲ್ವೀರ್ ಸಿಂಗ್ ದೇಶಕ್ಕೆ ಹೆಮ್ಮೆ ತರುವಂತಹ ಸಾಧನೆ ಮಾಡಿದ್ದಾರೆ. ಟ್ರ್ಯಾಕ್‌ ಆ್ಯಂಡ್‌ ಫೀಲ್ಡ್‌ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಅವರು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಪುರುಷರ 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಗುಲ್ವೀರ್ ಸಿಂಗ್, ಇದೀಗ 5,000 ಮೀಟರ್ ಓಟದಲ್ಲೂ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇದರೊಂದಿಗೆ ಒಂದೇ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಟ್ರ್ಯಾಕ್‌ ಆ್ಯಂಡ್‌ ಫೀಲ್ಡ್ ವಿಭಾಗದಲ್ಲಿ ಎರಡು ಪದಕ ಗೆದ್ದ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

10,000 ಮೀಟರ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ವಿಶೇಷ ದಾಖಲೆಯನ್ನೂ ಗುಲ್ವೀರ್ ಸಿಂಗ್ ನಿರ್ಮಿಸಿದ್ದರು. ಇದೀಗ 5,000 ಮೀಟರ್‌ನಲ್ಲೂ ಪದಕ ಗೆದ್ದು ತಮ್ಮ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿದ್ದಾರೆ. ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಅಥ್ಲೆಟಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿ ಪದಕ ಗೆದ್ದಿರುವ ಗುಲ್ವೀರ್ ಸಿಂಗ್ ಅವರ ಸಾಧನೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅವರ ಯಶಸ್ಸು ಕ್ರೀಡಾಪಟುಗಳಿಗೆ ಮಾತ್ರವಲ್ಲದೆ, ದೇಶದ ಯುವಜನತೆಗೆ ದೊಡ್ಡ ಸ್ಫೂರ್ತಿಯಾಗಿದೆ.

By Ravikumar - 02-08-2026


Ads in Post