Search


CCB uncovers network selling IPL black tickets | IPL ಬ್ಲಾಕ್ ಟಿಕೆಟ್ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ | Speed news kannada

ಸೀಕ್ರೆಟ್ ಗುರು

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಬ್ಲಾಕ್‌ ಟಕೆಟ್‌ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೋರ್ವ ಈ ದಂಧೆಯಲ್ಲಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಆರ್​ಸಿಬಿ ಟಿಕೆಟ್ ನಿರ್ವಹಣೆ ಮಾಡುವ ಡಿಎನ್ಎ (DNA) ಸಂಸ್ಥೆಗೆ ಸಂಕಷ್ಟ ಬಂದೊದಗಿದೆ. ಕೆಎಸ್​ಸಿಎ (KSCA) ಸದಸ್ಯ ಗಣೇಶ್ ಹರಿಕೇಶ್ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿಸಿಬಿ ಪೊಲೀಸರು ಡಿಎನ್ಎ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದಾರೆ. ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಚಂದ್ರಶೇಖರ್ ಎಂಬ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದಾಗ ವಿಚಾರಣೆ ವೇಳೆ ಆತ ಕೆಎಸ್​ಸಿಎ ಸದಸ್ಯ ಹರಿಕೇಶ್ ಹೆಸರನ್ನು ಬಹಿರಂಗಪಡಿಸಿದ್ದ. ಚಂದ್ರಶೇಖರ್ ಚಿನ್ನಸ್ವಾಮಿ ಸ್ಟೇಡಿಯಂನ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಾಗಿದ್ದು, ಅವನ ಮೂಲಕವೇ ಟಿಕೆಟ್‌ಗಳನ್ನು ಬ್ಲ್ಯಾಕ್​ನಲ್ಲಿ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಹೊರಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆರ್‌ಸಿಬಿಯ ಮೊದಲ ಪಂದ್ಯದಲ್ಲಿ 81 ಟಿಕೆಟ್‌ಗಳನ್ನು ಬ್ಲ್ಯಾಕ್​ನಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ನಂತರದ ಪಂದ್ಯಕ್ಕಾಗಿ 100 ಟಿಕೆಟ್‌ಗಳನ್ನು ಸಿದ್ಧಪಡಿಸಿಕೊಂಡಿದ್ದರು. ಒಟ್ಟಾರೆ ಸುಮಾರು 17 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 181 ಟಿಕೆಟ್‌ಗಳನ್ನು ಖರೀದಿಸಲಾಗಿದ್ದು, ಅವುಗಳ ಪೈಕಿ ಕನಿಷ್ಠ 100 ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ads in Post