ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲೇ, ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ಅಭಿಮಾನಿಗಳು ರಾತ್ರೋರಾತ್ರಿ ಸ್ಥಾಪಿಸಿದ್ದರು.ಹೈಕೋರ್ಟ್ ಕ್ರಾಸ್ ಬಳಿ ಈ ಹಿಂದೆ ‘ಸಿದ್ದರಾಮಯ್ಯ ವೃತ್ತ’ ಎಂದು ಹೆಸರಿಸಲಾಗಿದ್ದ ಸ್ಥಳದಲ್ಲೇ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. ಇದೇ ಮಾರ್ಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಫಜಲಪುರಕ್ಕೆ ತೆರಳುವ ಕಾರ್ಯಕ್ರಮವೂ ನಿಗದಿಯಾಗಿತ್ತು.
ಆದರೆ, ಪ್ರತಿಮೆ ಸ್ಥಾಪನೆಗೆ ಯಾವುದೇ ಕಾನೂನುಬದ್ಧ ಅನುಮತಿ ಪಡೆಯಲಾಗಿರಲಿಲ್ಲ. ಈ ವಿಷಯ ತಿಳಿಯುತ್ತಿದ್ದಂತೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪಾಲಿಕೆ ಅಧಿಕಾರಿಗಳು ಪ್ರತಿಮೆಯನ್ನು ತೆರವುಗೊಳಿಸಿದರು. ಅನುಮತಿ ಪಡೆಯದೆ ಪ್ರತಿಮೆ ಸ್ಥಾಪಿಸಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.