Search


ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬಗ್ಗೆ ಕುಮಾರಸ್ವಾಮಿ ರಿಯಾಕ್ಷನ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಿಂದ ಮೊಬೈಲ್ ಫೋನ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ತಮ್ಮನ್ನು ಪ್ರಶ್ನಿಸಿದ್ದಕ್ಕೆ ಸುದ್ದಿಗಾರರನ್ನೇ ಪ್ರಶ್ನಿಸಿದ ಅವರು, ಜೈಲಿನ ಭದ್ರತೆ ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಯುವುದು ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಯ ಜವಾಬ್ದಾರಿ ಎಂದು ಹೇಳಿದ್ದಾರೆ. 

ದೆಹಲಿಯಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದ ಜೈಲು ಬೆಳವಣಿಗೆಗಳ ಬಗ್ಗೆ “ಈ ಎಲ್ಲ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಅದು ನನ್ನ ಕಾಳಜಿಯ ವಿಷಯವೂ ಅಲ್ಲ” ಎಂದು ಸ್ಪಷ್ಟಪಡಿಸಿದರು. ಜೈಲಿನಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆದಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. 

“ಕೇಂದ್ರ ಕಾರಾಗೃಹವಾಗಿರಲಿ, ಪರಪ್ಪನ ಅಗ್ರಹಾರವಾಗಿರಲಿ, ಜೈಲಿನೊಳಗಿನ ಎಲ್ಲ ವಿಚಾರಗಳನ್ನು ಕಟ್ಟುನಿಟ್ಟಾಗಿ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಗೃಹ ಇಲಾಖೆಯದ್ದು. ಅದಕ್ಕೂ ನನಗೂ ಸಂಬಂಧವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕಳೆದ ವರ್ಷ ಆಗಸ್ಟ್ ನಲ್ಲಿ ನ್ಯಾಯಾಲಯ ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.

By Ravikumar - 13-08-2026


Ads in Post