Search


ಸ್ವಪಕ್ಷದ ಕಾರ್ಯಕರ್ತನಿಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಮಮತಾ ದೀದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರು ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಕಪಾಳಮೋಕ್ಷ ಮಾಡಿದ್ದಾರೆ. ಬರುಯಿಪುರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು. ಮಮತಾ ಬ್ಯಾನರ್ಜಿ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 ಇನ್ನು ಮಮತಾರ ಈ ವರ್ತನೆಯನ್ನ ಬಿಜೆಪಿ ನಾಯಕರು ಟೀಕಿಸಿದ್ದು, ಹಿರಿಯ ನಾಯಕನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಮಮತಾ ಬ್ಯಾನರ್ಜಿ ತಮ್ಮದೇ ಪಕ್ಷದ ಕಾರ್ಯಕರ್ತನ ಮೇಲೆ ಕಪಾಳಮೋಕ್ಷ ಮಾಡಿದ್ದಾರೆ. ಇದು ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಅವರ ಹತಾಶೆ ಮತ್ತು ಕೋಪವನ್ನು ಇದು ತೋರಿಸುತ್ತದೆ. ಕಳೆದ 15 ವರ್ಷಗಳಿಂದ, 2021 ರ ಚುನಾವಣಾ ಫಲಿತಾಂಶಗಳ ನಂತರ ನಮ್ಮ ಅನೇಕ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ, ಹಲವರು ತಮ್ಮ ಮನೆಗಳನ್ನು ತೊರೆಯಬೇಕಾಯಿತು ಎಂದು ಬಿಜೆಪಿ ನಾಯಕಿ ಕೀಯಾ ಘೋಷ್ ಹೇಳಿದರು.

ಬ್ಯಾನರ್ಜಿ ತನ್ನ ತಾಳ್ಮೆಯನ್ನು ಕಳೆದುಕೊಂಡು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕಪಾಳಮೋಕ್ಷ ಮಾಡಿದರು ಎಂದು ಮತ್ತೊಬ್ಬ ಬಿಜೆಪಿ ಸಂಸದ ರಾಜು ಬಿಸ್ತಾ ಹೇಳಿದ್ದಾರೆ. ಬುಧವಾರ ಹಂಚಿಕೊಂಡಿರುವ ಈ ವಿಡಿಯೊವನ್ನು ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಪೋಸ್ಟ್ ಮಾಡಿದ್ದಾರೆ. “ಚುನಾವಣೆಯಲ್ಲಿ ಸೋತ ನಂತರ ಮಮತಾ ಬ್ಯಾನರ್ಜಿ ತಮ್ಮ ಮಾನಸಿಕ ಸಮತೋಲನವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಇಂದು ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಮಮತಾ ಬ್ಯಾನರ್ಜಿ ತಮ್ಮದೇ ಪಕ್ಷಕ್ಕೆ ಸೇರಿದ ಹಲವರ ಮೇಲೆ ಕೈ ಮಾಡಿದ್ದಾರೆ ಎಂದು ಹೇಳಿದ್ದಾರೆ.

By Ravikumar - 10-07-2026


Ads in Post