ವೆನುಜುವೆಲಾ: ದಕ್ಷಿಣ ಅಮೆರಿಕಾ ಖಂಡದ ವೆನೆಜುವೆಲಾದಲ್ಲಿ ಭೀಕರ ಸರಣಿ ಭೂಕಂಪ(Earthquake ಸಂಭವಿಸಿದೆ. ಪರಿಣಾಮವಾಗಿ ಇಲ್ಲಿಯವೆರಗೂ ಕನಿಷ್ಠ 10 ಸಾವಿರದಿಂದ ಗರಿಷ್ಠ 1 ಲಕ್ಷ ಜನ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಕನಿಷ್ಠ 164 ಜನರ ಸಾವನ್ನ ಘೋಷಿಸಿದ್ದು. 970ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಖಚಿತ ಪಡಿಸಿವೆ.
ಕೇವಲ ಒಂದೇ ನಿಮಿಷದ ಅಂತರದಲ್ಲಿ 7.1 ಮತ್ತು 7.5 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿವೆ. ರಾಜಧಾನಿ ಕ್ಯಾರಕಾಸ್ನಲ್ಲಿ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ. ಜನರು ಭಯದಿಂದ ಮನೆಬಿಟ್ಟು ಹೊರಗೆ ಬಂದಿದ್ದಾರೆ. ಒನ್ನು ಈ ಭೂಕಂಪವನ್ನ ಕಳೆದ ಶತಮಾನದ ಭೀಕರ ಕಂಪನ ಎಂದು ಬಣ್ಣಿಸಿದ್ದು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದೆ.
ಭೂಕಂಪದ ತೀವ್ರತೆಗೆ ನೂರಾರು ಕಟ್ಟಡಗಳು ನೆಲಸಮವಾಗಿದ್ದು, ಅವಶೇಷಗಳ ಅಡಿಯಲ್ಲಿ ಇನ್ನೂ ಸಾವಿರಾರು ಜನರು ಸಿಲುಕಿರುವ ಆತಂಕ ಎದುರಾಗಿದೆ.
ಪ್ರಬಲ ಭೂಕಂಪದ ಕಂಪನಕ್ಕೆ ರಾಜಧಾನಿ ಕರಾಕಸ್ ಸೇರಿದಂತೆ ಪ್ರಮುಖ ನಗರಗಳ ಬಹು ಅಂತಸ್ತಿನ ಕಟ್ಟಡಗಳು, ವಸತಿ ಗೃಹಗಳು ಮತ್ತು ವಾಣಿಜ್ಯ ಸಂಕೀರ್ಣಗಳು ಕ್ಷಣಾರ್ಧದಲ್ಲಿ ಕುಸಿದು ಬಿದ್ದಿವೆ. ರಸ್ತೆಗಳು ಬಿರುಕು ಬಿಟ್ಟಿದ್ದು, ವಿದ್ಯುತ್ ಮತ್ತು ಸಂವಹನ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಆಸ್ಪತ್ರೆಗಳು ಹೌಸ್ಫುಲ್:
900ಕ್ಕೂ ಅಧಿಕ ಜನರು ಗಾಯಗೊಂಡಿರುವುದರಿಂದ ಸ್ಥಳೀಯ ಆಸ್ಪತ್ರೆಗಳಲ್ಲಿ ಬೆಡ್ಗಳು ಮತ್ತು ವೈದ್ಯಕೀಯ ಸಾಮಗ್ರಿಗಳ ಕೊರತೆ ಎದುರಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು, ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಭೂಕಂಪ ಪೀಡಿತ ವೆನೆಜುವೆಲಾಕ್ಕೆ ನೆರೆಹೊರೆಯ ದೇಶಗಳು ಹಾಗೂ ಜಾಗತಿಕ ಸಮುದಾಯವು ತುರ್ತು ರಕ್ಷಣಾ ಸಾಮಗ್ರಿಗಳು, ವೈದ್ಯಕೀಯ ತಂಡಗಳು ಮತ್ತು ಆಹಾರ ಪದಾರ್ಥಗಳನ್ನು ಕಳುಹಿಸಿಕೊಡಲು ಮುಂದಾಗಿವೆ. ದೇಶದ ಇತಿಹಾಸದಲ್ಲೇ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಭೂಕಂಪ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಸಂತ್ರಸ್ತರ ಆಕ್ರಂದನ ಮುಗಿಲು ಮುಟ್ಟಿದೆ.
ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ, ವೆನೆಜುವೆಲಾದ ರಾಜಧಾನಿ ಕರಾಕಸ್ನಿಂದ ಸುಮಾರು 1,700 ಕಿಲೋಮೀಟರ್ ದೂರದಲ್ಲಿರುವ ಬ್ರೆಜಿಲ್ನ ಅಮೆಜಾನ್ ಪ್ರದೇಶದವರೆಗೂ ಕಂಪನದ ಅನುಭವವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಕಟ್ಟಡಗಳಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗುತ್ತಿದೆ.