Search


ಪತನಗೊಂಡ ಸೇನಾ ಹೆಲಿಕಾಪ್ಟರ್‌ ಪಕ್ಕ ಸೆಲ್ಫಿ ಕ್ಲಿಕ್ಕಿಸಿಕೊಂಡ ಸೇನಾಧಿಕಾರಿಗಳು..!

ಲಡಾಕ್‌: ಭಾರತೀಯ ಸೇನಾ ಹೆಲಿಕಾಪ್ಟರ್‌ವೊಂದು ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ.

ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್ ಚಲಾಯಿಸುತ್ತಿದ್ದರು. ಇವರೊಂದಿಗೆ 3ನೇ ಪದಾತಿ ದಳದ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ ಆಗಿರುವ ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಪ್ರಯಾಣಿಕರಾಗಿ ಅದೇ ವಿಮಾನದಲ್ಲಿದ್ದರು.

ಅಧಿಕಾರಿಗಳು ಸುರಕ್ಷಿತ, ಸೆಲ್ಫಿ ವೈರಲ್ ಹೆಲಿಕಾಪ್ಟರ್ ಪತನಗೊಂಡ ತಕ್ಷಣವೇ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಅದೃಷ್ಟವಶಾತ್ ಮೂವರಿಗೂ ಕೇವಲ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಭೀಕರತೆಯಿಂದ ಪ್ರಾಣಾಪಾಯದಿಂದ ಪಾರಾದ ನಂತರ, ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಕ್ಲಿಕ್ಕಿಸಿಕೊಂಡ ಸೆಲ್ಫಿ  ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ.

ಪ್ರಸ್ತುತ ಹೆಲಿಕಾಪ್ಟರ್ ಪತನಕ್ಕೆ ನಿಖರವಾದ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಘಟನೆಗೆ ಕಾರಣವಾದ ತಾಂತ್ರಿಕ ದೋಷ ಅಥವಾ ಹವಾಮಾನದ ಸಂದರ್ಭಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಸೇನೆಯು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.
 

By thebigbulletin.com - 23-05-2026


Ads in Post