Search


ಮುಸ್ಲಿಂಮರು ಬಾಂಗ್ಲಾದೇಶದವರು ಎಂದ ಕುಮಾರಸ್ವಾಮಿ ವಿರುದ್ಧ ಶಾಸಕ ಬಾಲಕೃಷ್ಣ ವಾಗ್ದಾಳಿ

ರಾಮನಗರ: ರಾಜ್ಯದಲ್ಲಿ ನಡೆಯುತ್ತಿರುವ SIR ಬಗ್ಗೆ ಮೈತ್ರಿ ಪಕ್ಷಗಳೇರಡು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದು. ಕಾಂಗ್ರೆಸ್ ಪಾರ್ಟಿ ತನ್ನ ಅಧಿಕಾರ ಬಳಸಿಕೊಂಡು SIR ಪ್ರಕ್ರಿಯೆ ಮೇಲೆ ಪ್ರಭಾವ ಬೀರಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಭಾಗದಲ್ಲಿ ಮುಸ್ಲಿಂ ಮತದಾರರನ್ನು ಗುರಿಯಾಗಿಸಿ, ಅವರು ಬಾಂಗ್ಲಾದೇಶಿ ವಲಸಿಗರು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದು.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಮತ ಹಾಕಿಸಿಕೊಳ್ಳುತ್ತಿದ್ದಾಗ ಮುಸ್ಲಿಮರೆಲ್ಲರೂ ಕುಮಾರಸ್ವಾಮಿ ಅವರ ಪಾಲಿಗೆ ಸ್ಥಳೀಯರಾಗಿದ್ದರು. ಆದರೆ, ಈಗ ಎಸ್ಐಆರ್ ಕಾರಣಕ್ಕೆ ಬಾಂಗ್ಲಾದೇಶದವರಾಗಿ ಕಾಣುತ್ತಿದ್ದಾರೆ. ಒಂದು ಕೋಮಿನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಕರ್ತವ್ಯಗಳಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಯೋಗದ ನಿಯಂತ್ರಣದಲ್ಲಿರುತ್ತಾರೆ. ಮಾನದಂಡಕ್ಕೆ ಅನುಗುಣವಾಗಿಯೇ ಎಸ್ ಐಆರ್ ನಡೆಯುತ್ತಿದೆ. ಅಗತ್ಯ ದಾಖಲೆ ಕೊಟ್ಟರಷ್ಟೇ ಪ್ರಕ್ರಿಯೆ ನಡೆಸಲು ಸಾಧ್ಯ. ಹೀಗಿರುವಾಗ ಅಕ್ರಮ ಹೇಗೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದರು.

By Ravikumar - 08-07-2026


Ads in Post