Search


ಮೋದಿ ನನ್ನ ಜೀವನ ನರಕ ಮಾಡಿದ್ದಾರೆ; ಕ್ಷಮೆಯಾಚಿಸಿದ್ದ ಯುವತಿ ಯೂಟರ್ನ್, ಹೇಡಿ ಎಂದು ಟೀಕೆ

ನವದೆಹಲಿ: ಕಳೆದ ತಿಂಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹದಿಹರೆಯದ ಯುವತಿ ರುಚಿಕಾ ಸಿಂಗ್‌ (ಹೆಸರು ಬದಲಾಯಿಸಲಾಗಿದೆ) ಇದೀಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

ಹಿಂದಿನ ಹೇಳಿಕೆಗಳ ಬಳಿಕ ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದ 15 ವರ್ಷದ ರುಚಿಕಾ ಸಿಂಗ್‌, ಇದೀಗ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿ ಪ್ರಧಾನಿ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಅವರು, "ಮೋದಿ ಜೀ, ನೀವು ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದೀರಿ" ಎಂದು ಆರೋಪಿಸಿದ್ದಾರೆ. ಅಲ್ಲದೆ, ತನ್ನನ್ನು ನಿರಂತರವಾಗಿ ಕಾಡಲಾಗುತ್ತಿದೆ ಮತ್ತು ಎಲ್ಲೆಡೆ ತೊಂದರೆ ಎದುರಿಸುತ್ತಿದ್ದೇನೆ ಎಂದು ದೂರಿದ್ದಾರೆ.

"ನಾನು ಸ್ವತಂತ್ರವಾಗಿ ಎಲ್ಲಿಯೂ ಓಡಾಡಲು ಸಾಧ್ಯವಾಗುತ್ತಿಲ್ಲ. ಮುಖ ಮುಚ್ಚಿಕೊಂಡು ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 15 ವರ್ಷದ ಬಾಲಕಿಗೆ ಈ ರೀತಿಯ ಕಿರುಕುಳ ನೀಡಲಾಗುತ್ತಿದೆ" ಎಂದು ಅವರು ಆರೋಪಿಸಿದ್ದಾರೆ. ಇದೇ ವೇಳೆ, ತನಗೆ ಕಳೆದುಕೊಳ್ಳಲು ಏನೂ ಉಳಿದಿಲ್ಲ ಎಂದು ಹೇಳಿರುವ ರುಚಿಕಾ ಸಿಂಗ್‌, ಈ ಬಾರಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿಯವರ ವಿರುದ್ಧವೂ ತೀವ್ರ ಪದಗಳಲ್ಲಿ ಟೀಕೆ ಮಾಡಿರುವ ಅವರು, ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

By Ravikumar - 01-09-2026


Ads in Post