ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಸಿಎಂ ಡಿಕೆ ಶಿವಕುಮಾರ್ (CM DK Shivakumar) ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು. ಇದೇ ತಿಂಗಳಾತ್ಯಂದಲ್ಲಿ ಗಜಪಡೆ ಮೈಸೂರಿಗೆ ಪ್ರಯಾಣ ಬೆಳಸಲಿವೆ ಎಂದು ತಿಳಿದುಬಂದಿದೆ.
ನಾಡಹಬ್ಬದ ರೂಪುರೇಷೆ ಸೇರಿದಂತೆ ಗಜ ಪಯಣ, ದಸರಾ ಉದ್ಘಾಟನೆ, ಜಂಬೂ ಸವಾರಿ ಸೇರಿದಂತೆ ಈ ಬಾರಿ ದಸರಾದ ಪ್ರಮುಖ ಕಾರ್ಯಕ್ರಮಗಳ ಕುರಿತು ಸಿಎಂ ಡಿಕೆ ಶಿವಕುಮಾರ್ ಅವರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಈ ಬಾರಿ ಜುಲೈ 26 ರಂದು ಗಜಪಯಣ ಆರಂಭವಾಗಲಿದೆ. ಅಕ್ಟೋಬರ್ 11 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅ.21 ರಂದು ವಿಜಯದಶಮಿ ಜಂಬೂಸವಾರಿ ನಡೆಯಲಿದೆ.ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.
ಮುಂಬರುವ ದಿನಗಳಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ದಸರಾ ಉದ್ಘಾಟಕರನ್ನು ನೇಮಕ ಮಾಡಲಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಸರ್ಕಾರ 45 ಕೋಟಿ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಕಳೆದ ವರ್ಷ ದಸರಾ ಉದ್ಘಾಟನೆ ಮಾಡಿದ್ದರು.