ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ದಾಖಲಿಸಿರುವ FIRಗಳನ್ನು ತಕ್ಷಣ ಹಿಂಪಡೆಯದಿದ್ದರೆ ದೇಶಾದ್ಯಂತ ಮತ್ತೊಮ್ಮೆ ಶಾಂತಿಯುತ ಪ್ರತಿಭಟನೆ ಆರಂಭಿಸುವುದಾಗಿ Cockroach Janta Party (CJP) ಎಚ್ಚರಿಕೆ ನೀಡಿದೆ. ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮಾತನಾಡಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಪ್ರಕರಣ ದಾಖಲಿಸುವುದು ಮತ್ತು ತನಿಖೆ ನಡೆಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಬೇಕು. ಇಲ್ಲವಾದರೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದರು. ಇತ್ತೀಚಿನ ನ್ಯಾಯಾಂಗ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರ ನೀಡಿದ್ದ ಭರವಸೆಗಳು ಈಡೇರಿಲ್ಲ ಎಂದು CJP ಅಸಮಾಧಾನ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳನ್ನು ನಿಲ್ಲಿಸಿ, ಅವರಿಗೆ ನ್ಯಾಯ ಒದಗಿಸುವಂತೆ ಸರ್ಕಾರಕ್ಕೆ ಪಕ್ಷ ಒತ್ತಾಯಿಸಿದೆ. ಈ ವಿಚಾರದ ಕುರಿತು ಸರ್ಕಾರದ ಮುಂದಿನ ನಿರ್ಧಾರದತ್ತ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಕಣ್ಣಿಟ್ಟಿವೆ.
ಇನ್ನು ಇದೆ ವಿಚಾರದ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಕೊಟ್ಟಿದ್ದು. ಅಪರಾಧಿ ಹಿನ್ನಲೆ ಇಲ್ಲದ ವಿದ್ಯಾರ್ಥಿಗಳ ವಿರುದ್ಧ ಮತ್ತು ಅಪ್ರಾಪ್ತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಆದರೆ ಉದ್ದೇಶ ಪೂರ್ವಕವಾಗಿ ಗಲಭೆ ಎಬ್ಬಿಸಲು ಬಂದಿದ್ದದವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಅದೇಶಿಸಿದೆ. ಆದರೆ ಸುಪ್ರೀಂ ಕೋರ್ಟ್ ನೀಡಿದ ಆದೇಶಕ್ಕೆ ಸಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು. ಸರ್ಕಾರ ಶೀಘ್ರವೇ ಎಲ್ಲರ ಮೇಲಿನ ಕೇಸ್ ವಾಪಾಸ್ ಪಡೆಯಬೇಕು ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ